ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಂಡಳ ನೇತೃತ್ವದಲ್ಲಿ
ಜಿಲ್ಲೆಯ ಎಲ್ಲ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕುಗಳು, ಸೌಹಾರ್ದ ಸಹಕಾರಿ ಬ್ಯಾಂಕುಗಳು ಹಾಗೂ ಸಹಕಾರ ಇಲಾಖೆ ಸಹಯೋಗದಲ್ಲಿ ಬುಧವಾರ(ನ.೧೬) ಬೆಳಿಗ್ಗೆ ೧೧ ಗಂಟೆಗೆ ಬೆಳಗಾವಿಯ ಆಟೋ ನಗರದಲ್ಲಿರುವ ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ಪ್ರಾಂತೀಯ ಕಚೇರಿಯ ಕೆ.ಎಚ್.ಪಾಟೀಲ ಸಭಾಂಗಣದಲ್ಲಿ ೬೯ನೇ ಅಖಿಲ ಭಾರತ ಸಹಕಾರ ಸಪ್ತಾಹ-೨೦೨೨ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಬಸವರಾಜ ಸುಲ್ತಾನಪುರಿ ಅವರು ತಿಳಿಸಿದರು.
ನಗರದ ವಾರ್ತಾ ಭವನದಲ್ಲಿ ಮಂಗಳವಾರ (ನ.೧೫) ನಡೆದ ೬೯ನೇ ಅಖಿಲ ಭಾರತ ಸಹಕಾರ ಸಪ್ತಾಹ-೨೦೨೨ರ ಕುರಿತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ಸಹಕಾರ ಸಂಸ್ಥೆಗಳ ಬೆಳವಣಿಗೆ ಮತ್ತು ಮುಂದಿನ ಭವಿಷ್ಯದ ಧ್ಯೇಯದೊಂದಿಗೆ ಸಹಕಾರ ಶಿಕ್ಷಣ, ವೃತ್ತಿಪರ ನಿರ್ವಹಣೆಯನ್ನುಮುಖ್ಯ ವಾಹಿನಿಗೆ ತರಲು ಪುನರ್ ನಿರ್ಮಿಸುವುದು ವಿಷಯ ಕುರಿತು ಕಾರ್ಯಕ್ರಮದಲ್ಲಿ ಚರ್ಚೆ, ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬೆಳಗಾವಿ ಬಾಗಲಕೋಟೆ ವಿಜಯಪುರ ಜಿಲ್ಲೆಗಳಲ್ಲಿ ಆಯ್ಕೆ ಮಾಡಲಾದ ಶ್ರೇಷ್ಠ ಸಹಕಾರಿಗಳಿಗೆ “ಸಹಕಾರ ರತ್ನ” ಪ್ರಶಸ್ತಿ ಪ್ರಧಾನ ಮಾಡಲಾಗುವದು.
ಬೆಳಗಾವಿ ಜಿಲ್ಲೆಯಿಂದ ಅರವಿಂದ ಪಾಟೀಲ, ಆಶಾ ಪ್ರಭಾಕರ ಕೋರೆ, ಕುಮಾರ ಬದನೆಕಾಯಿ, ಮಲ್ಲಿಕಾರ್ಜುನ್ ಚುನಮರಿ, ಅನೀಲ ಪಾಟೀಲ, ಬಾಗಲಕೋಟೆ ಜಿಲ್ಲೆಯ ಚಂದ್ರಶೇಖರ ಜಿಗಜಿನ್ನಿ, ಅರವಿಂದ ಮಂಗಳೂರು, ವಿಜಯಪುರ ಜಿಲ್ಲೆಯಿಂದ, ವಿಠ್ಠಲಸಿಂಗ ಅಮರಸಿಂಗ್ ಹಜೇರಿ, ಮಲ್ಲಮ್ಮ ಯಾಳವಾರ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
https://pragati.taskdun.com/congress-ticketapplication-periodextension/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ