ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವತಿಯಿಂದ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ನವೆಂಬರ್ 18ರಂದು ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಬೆಳಗ್ಗೆ 10 ಘಂಟೆಯಿಂದ ಸಂಜೆ 4 ಘಂಟೆಯವರೆಗೆ ಹುದಲಿ ಉಪಕೇಂದ್ರದಿಂದ ಸರಬರಾಜು ಆಗುವ ಹುದಲಿ, ನಂದಿ ಕುಡಿಯುವ ನೀರಿನ ಘಟಕ, ಕುಮರಿ, ರಂಗದೋಳಿ, ತುಮ್ಮರಗುದ್ದಿ, ಸೋಮನಟ್ಟಿ, ಕಬಲಾಪುರ, ಚಂದೂರ, ಖನಗಾಂವ ಕೆ.ಎಚ್, ಖನಗಾಂವ ಬಿ.ಕೆ, ಅಷ್ಟೆ, ಮುಚ್ಚಂಡಿ, ಕಲಕಾಂಬ ಗ್ರಾಮಗಳಿಗೆ ಹಾಗೂ ಈ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಈ ಕುರಿತು ಬೆಳಗಾವಿ ಹೆಸ್ಕಾಂ ಗ್ರಾಮೀಣ ವಿಭಾಗದ ಕಾರ್ಯ ಮತ್ತು ಪಾಲನಾ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಾಪ್ ಕಾರ್ನ್, ಸ್ವೀಟ್ ಕಾರ್ನ್ ತಿಂದರೆ ಏನು ಪ್ರಯೋಜನ ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ