ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: 2023ರ ವಿಧಾನಸಭಾ ಚುನಾವಣೆಗೆ ಸ್ಪರ್ಧೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದಾರೆ. ಈಬಾರಿ ಬಾದಾಮಿ ಬಿಟ್ಟು ಕೋಲಾರದಿಂದ ಸ್ಪರ್ಧೆಗೆ ನಿರ್ಧರಿಸಿದ್ದಾರೆ. ಈ ನಿಟ್ಟಿನಲ್ಲಿ ಒಮ್ಮೆ ಕೋಲಾರ ಪ್ರವಾಸ ಕೈಗೊಂಡು ಪರಿಶೀಲನೆಯನ್ನೂ ನಡೆಸಿದ್ದಾರೆ. ಈ ಎಲ್ಲಾ ಬೆಳವಣಿಗಳ ನಡುವೆ ಸಿದ್ದರಾಮಯ್ಯ ಅವರ ಚುನಾವಣೆ ಸ್ಪರ್ಧೆಗೇ ಅಪಸ್ವರ ಕೇಳಿಬಂದಿದೆ. ಅದು ಕೂಡ ಸಿದ್ದರಾಮಯ್ಯ ಅವರ ಆಪ್ತರಿಂದಲೇ ಎಂಬುದು ಅಚ್ಚರಿ ವಿಚಾರ.
ಮಾಜಿ ಸಚಿವ, ಸಿದ್ದರಾಮಯ್ಯ ಅವರ ಆಪ್ತ ಸಂತೋಷ್ ಲಾಡ್, ಸಿದ್ದರಾಮಯ್ಯನವರು ಈ ಬಾರಿ ಚುನಾವಣೆಗೆ ನಿಲ್ಲದಿರುವುದು ಸೂಕ್ತ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಪಕ್ಷ ಸಂಘಟನೆ ಮಾಡಲಿ, ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರಯತ್ನಿಸಲಿ ಆದರೆ ಈ ಬಾರಿ ಅವರು ಚುನಾವಣೆಗೆ ಸ್ಪರ್ಧಿಸದಿರುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ರಾಜ್ಯಾದ್ಯಂತ ಎಲ್ಲಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲಿ. ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರವಾಸ ಕೈಗೊಳ್ಳಲಿ ಆದರೆ ಸ್ಪರ್ಧೆ ಬೇಡ ಎಂದು ಹೇಳಿದ್ದಾರೆ.
ಈಗಾಗಲೇ ಡಿ.ಕೆ.ಶಿವಕುಮಾರ್ ಅವರು ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಅವರು ಇನ್ನೂ ಅರ್ಜಿ ಕೂಡ ಸಲ್ಲಿಕೆ ಮಾಡಿಲ್ಲ ಎನ್ನಲಾಗಿದೆ. ಇನ್ನೊಂದೆಡೆ ಕ್ಷೇತ್ರ ಹುಡುಕಾಟದಲ್ಲಿಯೂ ತೊಡಗಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ಸಿದ್ದರಾಮಯ್ಯ ಅವರ ಆಪ್ತರೇ ಆಗಿರುವ ಸಂತೋಷ್ ಲಾಡ್ ಅವರ ಈ ಹೇಳಿಕೆ ಈಗ ರಾಜ್ಯ ಕಾಂಗ್ರೆಸ್ ನಾಯಕರಲ್ಲಿಯೇ ಚರ್ಚೆಗೆ ಕಾರಣವಾಗಿದೆ.
ವೋಟರ್ ಐಡಿ ಅಕ್ರಮ: ತನಿಖಾಧಿಕಾರಿ ನೇಮಕ ಮಾಡಿದ ಚುನಾವಣಾ ಆಯೋಗ
https://pragati.taskdun.com/voter-id-missuse-caseappointmentinvestigating-officer/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ