ಪ್ರಗತಿವಾಹಿನಿ ಸುದ್ದಿ, ಖಾನಾಪುರ: ತಾಲ್ಲೂಕಿನ ಗರ್ಲಗುಂಜಿ ಗ್ರಾಮದ ಬಳಿ ಬೆಳಗಾವಿ ಗರ್ಲಗುಂಜಿ ರಸ್ತೆಯಲ್ಲಿ ಪ್ರಯಾಣಿಕರ ಟೆಂಪೋ ಪಲ್ಟಿಯಾದ ಪರಿಣಾಮ ಟೆಂಪೋದಲ್ಲಿದ್ದ 28 ಪ್ರಯಾಣಿಕರು ಗಾಯಗೊಂಡ ಘಟನೆ ಶುಕ್ರವಾರ ಸಂಭವಿಸಿದೆ.
ಈ ಘಟನೆಯಲ್ಲಿ ಗಾಯಗೊಂಡವರೆಲ್ಲರೂ ಬೆಳಗಾವಿ ತಾಲ್ಲೂಕಿನ ಹುದಲಿ ಗ್ರಾಮದ ಒಂದೇ ಕುಟುಂಬದವರು.
ಇವರೆಲ್ಲರೂ ಗರ್ಲಗುಂಜಿ ಗ್ರಾಮದಲ್ಲಿ ಶುಕ್ರವಾರ ನಿಗದಿಯಾಗಿದ್ದ ಮದುವೆ ನಿಶ್ಚಿತಾರ್ಥದಲ್ಲಿ ಭಾಗವಹಿಸಲು ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಗರ್ಲಗುಂಜಿ ಮತ್ತು ರಾಜಹಂಸಗಡ ಗ್ರಾಮಗಳ ನಡುವಿನ ಇಳಿಜಾರಿನಲ್ಲಿ ಸಾಗುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಟೆಂಪೋ ಚಾಲಕ ಇಳಿಜಾರಿನಲ್ಲಿ ವಾಹನವನ್ನು ನ್ಯೂಟ್ರಲ್ ಮಾಡಿದ್ದರಿಂದ ವೇಗವಾಗಿ ಹೊರಟಿದ್ದ ಟೆಂಪೋ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ದೂರು ದಾಖಲಿಸಿಕೊಂಡಿರುವ ಖಾನಾಪುರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡವರಲ್ಲಿ ಇಬ್ಬರು ವಯೋವೃದ್ಧರು, ಐವರು ಚಿಕ್ಕ ಮಕ್ಕಳು ಮತ್ತು 12 ಜನ ಮಹಿಳೆಯರು ಸೇರಿದ್ದಾರೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಾಲ್ಲೂಕು ಆಸ್ಪತ್ರೆಯ ಮೂಲಗಳು ತಿಳಿಸಿವೆ.
https://pragati.taskdun.com/approval-for-7th-pay-commission-appointment-of-three-more-members/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ