ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಚಿಲುಮೆ ಸಂಸ್ಥೆಯಿಂದ ದೊಡ್ಡ ಹಗರಣವೇ ನಡೆದಿದೆ. ಹಗರಣದ ಹಿಂದೆ ರಾಜ್ಯ ಸರ್ಕಾರವೂ ಶಾಮೀಲಾಗಿದೆ. ಸರ್ಕಾರಕ್ಕೆ ಮಾಹಿತಿ ಇಲ್ಲದೇ ಇದೆಲ್ಲವೂ ನಡೆಯಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ವೋಟರ್ ಐಡಿ ಪರೀಷ್ಕರಣೆ ಹೆಸರಲ್ಲಿ ಮತದಾರರ ಹಕ್ಕನ್ನು ಕಸಿದುಕೊಳ್ಳುತ್ತಿದ್ದಾರೆ. ಹಲವೆಡೆ ಮತದಾರರ ಪಟ್ಟಿಯಿಂದ ಹೆಸರೇ ಡಿಲಿಟ್ ಮಾಡಿದ್ದಾರೆ. ವೋಟರ್ ಐಡಿ ಅಕ್ರಮಕ್ಕೆ ಸಂಬಂಧಿಸಿದಂತೆ ಈವರೆಗೆ ಪೊಲೀಸರು ಯಾರನ್ನೂ ಬಂಧಿಸಿಲ್ಲ ಎಂದರು.
ಚಿಲುಮೆ ಸಂಸ್ಥೆಯಲ್ಲಿ ದೊಡ್ಡ ಅವ್ಯವಹಾರವೇ ನಡೆದಿದೆ. ಸಂಸ್ಥೆಯಲ್ಲಿ ನೋಟ್ ಕೌಂಟಿಂಗ್ ಮಷಿನ್ ಪತ್ತೆಯಾಗಿದೆ. ಬ್ಲ್ಯಾಕ್ ಮನಿ ವೈಟ್ ಮನಿ ಮಾಡುವ ದಂಧೆ ನಡೆಯುತ್ತಿದೆ. ಈ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಸಂಗ್ರಹಿಸಿದ್ದೇವೆ. ಸಂಸ್ಥೆ ಮೂಲಕ ಸರ್ಕಾರವೇ ಹಗರಣ ನಡೆಸಿದ್ದಾರೆ.
ನಿನ್ನೆ ಪೊಲೀಸರು ದಾಳಿ ನಡೆಸಿ ಕೆಲವು ದಾಖಲೆ ವಶಪಡಿಸಿಕೊಂಡಿದ್ದು, ಅಲ್ಲಿ ನೋಟು ಏಣಿಕೆ ಯಂತ್ರಗಳು ಲಭ್ಯವಾಗಿವೆ. ಟ್ರಸ್ಟ್ ಗಳಲ್ಲಿ 2 ಸಾವಿರಕ್ಕಿಂತ ಹೆಚ್ಚಿನ ಹಣವನ್ನು ದೇಣಿಗೆಯಾಗಿ ಪಡೆಯುವಂತಿಲ್ಲ. ಚೆಕ್ ಮೂಲಕವೇ ಪಡೆಯಬೇಕು. ಹೀಗಿರುವಾಗ ಅಲ್ಲಿ ನೋಟು ಏಣಿಕೆ ಯಂತ್ರ ಯಾಕಿತ್ತು? ಆ ಕಚೇರಿಯಲ್ಲಿ ಕಪ್ಪು ಹಣ ಬಿಳಿ ಹಣವಾಗಿ ಪರಿವರ್ತನೆಯಾಗುತ್ತಿತ್ತು. ಈ ವಿಚಾರವಾಗಿ ಮುಂದೆ ದಾಖಲೆ ಸಮೇತ ಮಾತನಾಡುತ್ತೇವೆ.
ಎಲ್ಲಾ ವಿಚಾರದ ಬಗ್ಗೆ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸುತ್ತೇವೆ. ಚುನಾವಣಾ ಆಯೋಗಕ್ಕೂ ದೂರು ನೀಡುತೇವೆ ಎಂದು ಹೇಳಿದರು.
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನ ನಿಮಿತ್ತ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಶನಿವಾರ ಪುಷ್ಪನಮನ ಸಲ್ಲಿಸಿದರು.
ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆ; ಮೂವರು ವಿದ್ಯಾರ್ಥಿಗಳ ವಿರುದ್ಧ FIR
https://pragati.taskdun.com/bangalorecollege3-studentspakistan-zindabadh/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ