Latest

ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಚಲಿಸುತ್ತಿದ್ದ ಆಟೋ ಏಕಾಏಕಿ ನಿಗೂಢವಾಗಿ ಸ್ಫೋಟಗೊಂಡ ಘಟನೆ ಮಂಗಳೂರಿನ ನಾಗುರಿಯಲ್ಲಿ ಸಂಭವಿಸಿದೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮಂಗಳೂರಿನ ನಾಗುರಿ ಎಂಬ ಸ್ಥಳದಲ್ಲಿ ಈ ಘಟನೆ ನಡೆದಿದ್ದು, ಆಟೋದಲ್ಲಿ ಛಿದ್ರ ಛಿದ್ರಗೊಂಡಿರುವ ಕುಕ್ಕರ್ ಪತ್ತೆಯಾಗಿದೆ. ಸ್ಫೊಟದ ರಭಸಕ್ಕೆ ಆಟೋದಲ್ಲಿದ್ದ ಪ್ರಯಾಣಿಕ ಹಾಗೂ ಆಟೋ ಚಾಲಕ ಗಾಯಗೊಂಡಿದ್ದಾರೆ.

ಘಟನಾಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹಾಗೂ ವಿಧಿ ವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅನಾಮಧೇಯ ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ಸ್ಮಾರಕ ನಿರ್ಮಾಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

https://pragati.taskdun.com/statue-of-freedom-fighter-kedambadi-ramaiah-gowdabavutaguddecm-basavaraj-bommai/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button