Kannada NewsLatest

ಬೆಳಗಾವಿ ಪೊಲೀಸರಿಂದ ಸಾರ್ವಜನಿಕರಲ್ಲಿ ವಿಶೇಷ ಮನವಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ:  ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಕನ್ನಡದ ’ಹೊಯ್ಸಳ’ ಸಿನಿಮಾ ಚಿತ್ರೀಕರಣ ನಡೆದಿದ್ದು, ಈ ಚಿತ್ರದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಪೊಲೀಸ್ ಇಲಾಖೆ ಬಗ್ಗೆ ತಪ್ಪು ಸಂದೇಶ ರವಾನೆಯಾಗುವಂತೆ ಮಾಡಿದೆ.

ಈ ದೃಶ್ಯದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ವ್ಯಕ್ತಿಯೋರ್ವನನ್ನು ಕೆಳಗೆ ತಳ್ಳಿ ಬೂಟುಗಾಲಿನಿಂದ ಒದೆಯುತ್ತಿರುವ ದೃಶ್ಯವಿದ್ದು, ಇದನ್ನು ನೈಜ ಘಟನೆಯೆಂಬಂತೆ ಬಿಂಬಿಸಿ ಪೊಲೀಸ್ ಇಲಾಖೆ ಬಗ್ಗೆ ತಪ್ಪು ಸಂದೇಶ ರವಾನಿಸಲಾಗುತ್ತಿದೆ.

Home add -Advt

ಇದನ್ನು ತಪ್ಪಾಗಿ ಅರ್ಥೈಸಿಕೊಳ್ಳದಂತೆ ಹಾಗೂ ಪೊಲೀಸ್ ಇಲಾಖೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಋಣಾತ್ಮಕವಾಗಿ ಪೋಸ್ಟ್, ಕಮೆಂಟ್ಸ್ ಮಾಡದಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಹೊಸ ಅಭಿಯಾನ ಆರಂಭ

https://pragati.taskdun.com/votersdata-entrybbmp/

Related Articles

Back to top button