Latest

ಶಾಸಕನ ಬಟ್ಟೆ ಹರಿದು ಹಲ್ಲೆ; 10 ಜನರ ಬಂಧನ

 

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಬಟ್ಟೆ ಹರಿದು, ಥಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ 10 ಜನರನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರು ಗ್ರಾಮದಲ್ಲಿ ನಡೆದಿದೆ.

ಕಾಡಾನೆ ದಾಳಿಯಿಂದಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮಹಿಳೆಯ ಶವವಿಟ್ಟು ನಿನ್ನೆ ಇಡೀ ದಿನ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ನಿನ್ನೆ ಸಂಜೆ ಗ್ರಾಮಕ್ಕೆ ಆಗಮಿಸಿದ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆ ದಾಳಿಗೆ ಹಲವು ದಿನಗಳಿಂದ ಜನರು ಸಾವನ್ನಪ್ಪುತ್ತಿದ್ದರೂ ಜನಪ್ರತಿನಿಧಿಗಳು, ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ ಮೆರೆದಿದೆ ಎಂದು ಕಿಡಿಕಾರಿದ್ದಾರೆ.

Home add -Advt

ಅಲ್ಲದೇ ತಡವಾಗಿ ಗ್ರಾಮಕ್ಕೆ ಬಂದ ಶಾಸಕರ ವಿರುದ್ಧ ಗ್ರಾಮಸ್ಥರು ಘೋಷಣೆ ಕೂಗಿದ್ದಾರೆ. ಈ ವೇಳೆ ಗ್ರಾಮಸ್ಥರನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಇದರಿಂದ ಇನ್ನಷ್ಟು ಕೆರಳಿದ ಗ್ರಾಮಸ್ಥರು ಶಾಸಕರನ್ನು ಹಿಡಿದು ಥಳಿಸಿದ್ದಾರೆ. ಈ ವೇಳೆ ನೂಕಾಟ ತಳ್ಳಾಟದಲ್ಲಿ ಶಾಸಕರ ಬಟ್ಟೆ ಹರಿದಿದೆ ಎನ್ನಲಾಗಿದೆ.

ಇದೀಗ ಪ್ರಕರಣ ಸಂಬಂಧ ಪೊಲೀಸರು 10 ಜನರನ್ನು ಬಂಧಿಸಿದ್ದಾರೆ.

ಮಂಗಳೂರು ಬಾಂಬ್ ಸ್ಫೋಟ; ಶಂಕಿತರ ಮನೆ ಮೇಲೆ ಪೊಲೀಸರ ದಾಳಿ

https://pragati.taskdun.com/mangalore-bomb-blast-casepolice-raidshivamogga/

Related Articles

Back to top button