Latest

ಸಿದ್ದರಾಮಯ್ಯ ಪರ ಆಪ್ತ ಸಹಾಯಕರಿಂದ ಅರ್ಜಿ ಸಲ್ಲಿಕೆ ; ಕ್ಷೇತ್ರದ ಕುತೂಹಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪರವಾಗಿ ಕಾಂಗ್ರೆಸ್ ಟಿಕೆಟ್ ಗಾಗಿ ಅವರ ಆಪ್ತ ಸಹಾಯಕ ಅರ್ಜಿ ಸಲ್ಲಿಸಿದ್ದಾರೆ.

ಇನ್ನೊಂದು ಸಂಗತಿಯೆಂದರೆ ಸಿದ್ದರಾಮಯ್ಯ ತಾವು ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂಬ ಗುಟ್ಟನ್ನೂ ಬಿಟ್ಟುಕೊಟ್ಟಿಲ್ಲ.

ಕೆಪಿಸಿಸಿ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪರವಾಗಿ ಆಪ್ತ ಸಹಾಯಕರಾದ ಪ್ರಭಾಕರ್ ಹಾಗೂ ವೆಂಕಟೇಶ್ ಎಂಬುವವರು ಟಿಕೆಟ್ ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ಕ್ಷೇತ್ರದ ಹೆಸರು ಉಲ್ಲೇಖಿಸಿಲ್ಲ.

ಹೈಕಮಾಂಡ್ ಸೂಚನೆ ಮೇರೆಗೆ ಕ್ಷೇತ್ರದ ಆಯ್ಕೆ ಎಂದಷ್ಟೇ ಬರೆದು ಅರ್ಜಿ ಸಲ್ಲಿಸಿದ್ದಾರೆ. ಒಟ್ಟಾರೆ ಸಿದ್ದಾರಮಯ್ಯ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ ನಿಜ ಆದರೆ ಕ್ಷೇತ್ರ ಆಯ್ಕೆಯಲ್ಲಿ ಇನ್ನೂ ಗೊಂದಲದಲ್ಲಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ಕೋಲಾರ ಜಿಲ್ಲಾ ಪ್ರವಾಸ ಮಾಡಿದ್ದ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಈಗ ಅರ್ಜಿ ಸಲ್ಲಿಕೆ ವೇಳೆ ಯಾವುದೆ ಕ್ಷೇತ್ರ ಉಲ್ಲೇಖಿಸದ ಹಿನ್ನೆಲೆಯಲ್ಲಿ ಇನ್ನಷ್ಟು ಗೊದಲದಲ್ಲಿದ್ದಾರೆ ಎಂದೇ ಹೇಳಲಾಗುತ್ತಿದೆ.

ಬಿಜೆಪಿ ಹಲವು ನಾಯಕರು ಕಾಂಗ್ರೆಸ್ ಗೆ ಸೇರ್ಪಡೆ

https://pragati.taskdun.com/bjp-leadersu-b-banakarcongress-joinkpcc-office/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button