ಪ್ರಗತಿವಾಹಿನಿ ಸುದ್ದಿ; ಉಡುಪಿ: ಆರೋಗ್ಯವಾಗಿದ್ದ ಯುವತಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಜೋಸ್ನಾ ಲೂವಿಸ್ (23) ಮೃತ ಯುವತಿ. ಸಂಬಂಧಿಕರ ರೋಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜೋಸ್ನಾ, ಕುಳಿತಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಜೋಸ್ನಾ ಉಡುಪಿ ಜಿಲ್ಲೆಯ ಬ್ರಹ್ಮಾವರ ಮೂಲದವರು. ಕೊಳಲಗಿರಿಯ ಸಮೀಪದ ಹಾವಂಜೆಯ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಕುಳಿತಲ್ಲೇ ಯುವತಿ ಕುಸಿದು ಬಿದ್ದಿದ್ದು, ದುರಂತ ಸಂಭವಿಸಿದೆ. ಯುವತಿ ಜೋಸ್ನಾಗೆ ಯಾವುದೇ ಆರೋಗ್ಯ ಸಮಸ್ಯೆಗಳೂ ಇರಲಿಲ್ಲ. ಆದರೂ ಇದ್ದಕ್ಕಿದ್ದಂತೆ ಯುವತಿ ಕುಸಿದು ಬಿದ್ದು ಸಾವನ್ನಪ್ಪಿರುವುದು ಕುಟುಂಬದವರನ್ನು ಆಘಾತಕ್ಕೀಡು ಮಾಡಿದೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರಾವಳಿ ಭಾಗದ ಅಭಿವೃದ್ಧಿ, ಉದ್ಯೋಗ ಸೃಷ್ಟಿಗೆ ಕಾಂಗ್ರೆಸ್ ಪ್ರತ್ಯೇಕ ಪ್ರಣಾಳಿಕೆ
https://pragati.taskdun.com/kumatad-k-shivakumarjanajagruti-samavesh/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ