Latest

ಕತಾರ್: ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಂಗೆ ತುಳುನಾಡಿನ ಮಹಿಳೆ ಆಯ್ಕೆ

ಪ್ರಗತಿವಾಹಿನಿ ಸುದ್ದಿ, ಬಂಟ್ವಾಳ:  ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೋರ್ವರು ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ ಕತಾರಿನ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾದವರು.

ಈ ಮೂಲಕ ಇವರು ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆ ಸೂರಂಡೆ ನಿವಾಸಿಗಳಾದ ನಾರಾಯಣ ಪೂಜಾರಿ ಮತ್ತು ಶ್ರೀಮತಿ ದಂಪತಿಗಳ‌ ಪುತ್ರಿಯಾದ ಪ್ರತಿಭಾ ಅವರು ವಾಮದಪದವು ಸಮೀಪದ ಕುಡಂಬೆಟ್ಟು ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರನ್ನು ವಿವಾಹವಾಗಿದ್ದು, ಸಂಸಾರ ಸಹಿತ ಕಳೆದ ಕೆಲವು ವರ್ಷಗಳಿಂದ ದೋಹಾ ಕತಾರಿನಲ್ಲಿ ನೆಲೆಯಾಗಿದ್ದಾರೆ.

ಪ್ರತಿಭಾ ಎನ್.ದರ್ಖಾಸು ಅವರು ಕತಾರಿನ ಹಾಮದ್ ಮೆಡಿಕಲ್ ಕಾರ್ಪೋರೇಶನ್ ಸರಕಾರಿ ಅಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದು ಕೊರೊನಾ ಸಹಿತ ಇತರ ಸಂದರ್ಭದಲ್ಲಿನ ಇವರ ವಿಶೇಷ ಸೇವೆಯನ್ನು ಗುರುತಿಸಿ ಈಗಾಗಲೇ ಗೌರವಿಸಲಾಗಿತ್ತು.

ಇದೀಗ ಇವರು ಆರೋಗ್ಯ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಅನನ್ಯ ಸೇವೆಯನ್ನು ಪರಿಗಣಿಸಿ ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ನರ್ಸಿಂಗ್ ಇನ್ಚಾರ್ಜ್ ಆಗಿ ಸೇವೆ ಸಲ್ಲಿಸಲು ಆಯ್ಕೆ ಮಾಡಲಾಗಿದೆ.


ಈ ಅಪೂರ್ವ ಸೇವೆಗೆ ಆಯ್ಕೆಯಾದ ಪ್ರತಿಭಾ ಎನ್.ದರ್ಖಾಸು ಅವರಿಗೆ ತುಳುನಾಡಿನಾದ್ಯಾಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಒಂದೇ ಕಲ್ಲಿನಲ್ಲಿ ಹಲವು ಹಕ್ಕಿಗಳಿಗೆ ಗುರಿ ಇಟ್ಟ ರಮೇಶ್ ಜಾರಕಿಹೊಳಿ; ಬಿಜೆಪಿ ಕೊಳದಲ್ಲಿ ಎದ್ದಿದೆ ದೊಡ್ಡ ಅಲೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button