ಪ್ರಗತಿವಾಹಿನಿ ಸುದ್ದಿ; ಕೊಲ್ಲಾಪುರ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹಾಗೂ ಮಹಾರಾಷ್ಟ್ರ ರಾಜಕೀಯ ನಾಯಕರ ಹೇಳಿಕೆಗಳ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿರುವ ಕನ್ನಡಿಗರು ಅಲ್ಲಿನ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.
ಗಡಿ ವಿವಾದ ತಾರಕಕ್ಕೇರುತ್ತಿದ್ದಂತೆ ಮಹಾರಾಷ್ಟ್ರದಲ್ಲಿರುವ ಕನ್ನಡಿಗರು, ಮಹಾರಾಷ್ಟ್ರದ ಹಲವು ಪ್ರದೇಶಗಳನ್ನು ಕರ್ನಾಟಕಕ್ಕೆ ಸೇರಿಸಿ ಕರ್ನಾಟಕದ ಹೊಸ ನಕ್ಷೆಯನ್ನೇ ತಯಾರಿಸಿ ಏಕನಾಥ್ ಶಿಂಧೆ ಸರ್ಕಾರಕ್ಕೆ ಖಡಕ್ ಉತ್ತರ ಕೊಟ್ಟಿದ್ದಾರೆ.
ಮಹಾರಾಷ್ಟ್ರದ ಕೊಲ್ಲಾಪುರ, ಸೋಲ್ಲಾಪುರ, ಉಸ್ಮನಬಾದ್, ಲಾತೂರು, ಸಾಂಗ್ಲಿ ಜಿಲ್ಲೆಗಳನ್ನು ಕರ್ನಾಟಕ ನಕ್ಷೆಯಲ್ಲಿ ಸೇರಿಸಿ ಹೊಸ ನಕ್ಷೆ ತಯಾರಿಸಿ ಸಾಮಾಜಿಕ ಜಾಲತಣಗಳಲ್ಲಿ ಪ್ರಕಟಿಸಿದ್ದಾರೆ.
ಗಡಿ ವಿಚಾರ ಹಾಗೂ ಭಾಷಾ ವಿಚಾರ ಮುಂದಿಟ್ಟುಕೊಂಡು ಸದಾ ಕ್ಯಾತೆ ತೆಗೆಯುತ್ತಿರುವ ಮಹಾರಾಷ್ಟ್ರ ಸರ್ಕಾರಕ್ಕೆ ಈಗಾಗಲೇ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಜನರು ತಮ್ಮನ್ನು ಕರ್ನಾಟಕಕ್ಕೆ ಸೇರಿಸುವಂತೆ ಪಟ್ಟು ಹಿಡಿದಿದ್ದಾರೆ. 8 ದಿನಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ಕರ್ನಾಟಕಕ್ಕೆ ಹೋಗುವುದಾಗಿಯೂ ಜತ್ ತಾಲೂಕಿನ 42 ಹಳ್ಳಿಗಳ ಜನರು ಎಚ್ಚರಿಸಿದ್ದಾರೆ. ಆದರೂ ಬುದ್ಧಿ ಕಲಿಯದ ಮಹಾ ಸರ್ಕಾರ ಗಡಿ ವಿಚಾರದಲ್ಲಿ ತಗಾದೆ ಮುಂದುವರಿಸಿದೆ. ಇದರ ಬೆನ್ನಲ್ಲೇ ಮಹಾರಾಷ್ಟ್ರದ ಕನ್ನಡಿಗರು ಪ್ರಸ್ತುತ ಇರುವ ಕರ್ನಾಟಕ ನಕ್ಷೆಗೆ ಮಹಾರಾಷ್ಟ್ರದ ಕೆಲ ಜಿಲ್ಲೆಗಳನ್ನು ಸೇರಿ ಹೊಸ ನಕ್ಷೆ ತಯಾರಿಸಿದ್ದಾರೆ.
ಶರದ್ ಪವಾರ್ ಗೆ ಖಡಕ್ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ
https://pragati.taskdun.com/cm-basavaraj-bommaisharad-pawarkarnataka-maharashtra-border-issue/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ