Latest

ಸ್ವಚ್ಛ ಮೇವ ಜಯತೇ ಆಂದೋಲನ ಹಾಗೂ ಜಲಾಮೃತ ಕಾರ್ಯಕ್ರಮ

ಪ್ರಗತಿವಾಹಿನಿ ಸುದ್ದಿ, ಸಿಂದಗಿ: 
ಇಂದು ಸಿಂದಗಿ ತಾಲೂಕಿನ ಯಂಕಂಚಿ ಗ್ರಾಮದಲ್ಲಿ ಜಿಲ್ಲಾ ಪಂಚಾಯತ ವಿಜಯಪುರ, ತಾಲೂಕು ಪಂಚಾಯತ ಸಿಂದಗಿ ಜಾಗೂ ಗ್ರಾಮ ಪಂಚಾಯತ ಯಂಕಂಚಿ ಇವರ ಸಂಯುಕ್ತಾಶ್ರಯದಲ್ಲಿ ಸ್ವಚ್ಛ ಭಾರತ ಮಿಷನ್ (ಗ್ರಾ) ಯೋಜನೆಯಡಿ ಸ್ವಚ್ಛ ಮೇವ ಜಯತೇ ಹಾಗೂ ಜಲಾಮೃತ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಜರುಗಿತು.
ಕಾರ್ಯಕ್ರಮವನ್ನು  ವಿಜಯಪುರ  ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಅಮರೇಶ ನಾಯಕ  ಉದ್ಘಾಟಿಸಿ,    ವಿಜಯಪುರ ಜಿಲ್ಲೆಯಲ್ಲಿ ಒಟ್ಟು 213 ಗ್ರಾಮ ಪಂಚಾಯತಿಗಳಿದ್ದು ಈ ಎರಡು ಕಾರ್ಯಕ್ರಮಗಳ ಅಭಿಯಾನದ ಮುಖಾಂತರ ಈ ತಿಂಗಳು ಪ್ರತಿ ಗ್ರಾಮ ಪಂಚಾಯತಿಗೆ ಕನಿಷ್ಠ 1000 ರಂತೆ ಸಸಿಗಳನ್ನು ನೆಡಲು ಯೋಜನೆ ಹಾಕಿಕೊಂಡಿದ್ದೆವೆ. ಈ ತಿಂಗಳ ಅಂತ್ಯದಲ್ಲಿ ನಮ್ಮ ಜಿಲ್ಲೆಯಲ್ಲಿ 2,13,000 ಸಸಿಗಳನ್ನು ನೆಡಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೆವೆ. ಅವುಗಳನ್ನು ಪೋಷಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲೆ ಇದೆ ಎಂದರು.
 ಕಾರ್ಯನಿರ್ವಾಹಕ ಅಧಿಕಾರಿ ಸುನೀಲ ಮದ್ದಿನ ಅವರು ಶೌಚಾಲಯದ ಮತ್ತು ಪರಿಸರದ ಕುರಿತು ಅದರ ಮಹತ್ವಗಳ ಬಗ್ಗೆ ತಿಳಿಸಿದರು.
 ಜಿಲ್ಲಾ ಪಂಚಾಯತಿಯ ನೆರವು ಘಟಕದ ಅಧಿಕಾರಿ  ವಿಜಯ್ ಆಲಗೂರ ಅವರು ಮಕ್ಕಳಿಗೆ ಮತ್ತು ಗ್ರಾಮಸ್ಥರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮಕ್ಕೂ ಮುನ್ನ 500ಕ್ಕೂ ಹೆಚ್ಚು ಮಕ್ಕಳಿಂದ ಸ್ವಾಭಿಮಾನಕ್ಕಾಗಿ ಸ್ವಚ್ಛತೆ ಘೋಷಣೆಯಡಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು. ನಂತರ ಶಾಲಾ ಆವರಣದಲ್ಲಿ ಗಣ್ಯರು ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸುವಂತೆ ಮಕ್ಕಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ  ಭೌರಮ್ಮ ಬಿರಾದಾರ,    ಮಹೇಶ ಬಗಲಿ, ಆದಣ್ಣ ಹೊಸಮನಿ, ಸ್ವಚ್ಚ ಭಾರತ ಅಭಿಯಾನ ಯೋಜನೆಯ ತಾಲೂಕು ಸಂಯೋಜಕ ಕಲ್ಲಪ್ಪ ನಂದರಗಿ ಸೇರಿದಂತೆ ತಾಲೂಕು ಪಂಚಾಯತ ಮತ್ತು ಗ್ರಾಮ ಪಂಚಾಯತಿಯ ಸದಸ್ಯರು ಸಿಬ್ಬಂದಿ ಹಾಜರಿದ್ದರು.
ಕಾರ್ಯಕ್ರಮವನ್ನು ಸಿದ್ದಣ್ಣ ಪೂಜಾರಿ ನಿರೂಪಿಸಿದರು. ಕಾರ್ಯನಿರ್ವಾಹಕ ಅಧಿಕಾರಿ ಸುನೀಲ ಮದ್ದಿನ ಸ್ವಾಗತಿಸಿದರು. ಸ್ವಚ್ಚ ಭಾರತ ಅಭಿಯಾನ ಯೋಜನೆಯ ತಾಲೂಕು ಸಂಯೋಜಕ ಕಲ್ಲಪ್ಪ ನಂದರಗಿ ವಂದಿಸಿದರು.
ಹೆಚ್ಚಿನ ಸುದ್ದಿಗಳಿಗಾಗಿ pragativahini.com ನೋಡಿ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಪರಿಚಿತರಿಗೆ, ಇತರ ಗ್ರುಪ್ ಗಳಿಗೆ ಶೇರ್ ಮಾಡಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button