ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಓಲಮನಿ ಗ್ರಾಮದ ಬಳಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವರು ಗಾಯಗೊಂಡಿದ್ದಾರೆ.
ಬಸ್ಸು ಗೋವಾ ರಾಜ್ಯದ ಮಡಗಾಂವ್ ನಿಂದ ಬೈಲೂರು ಗ್ರಾಮಕ್ಕೆ ಸಾಗುತ್ತಿತ್ತು. ಬಸ್ ನಲ್ಲಿದ್ದವರು ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದರು.
ಬೆಳಗಿನ ಜಾವ 4.30ರ ಸುಮಾರಿಗೆ ಚಾಲಕನ ಹತೋಟಿ ತಪ್ಪಿದ ಬಸ್ ಪಲ್ಟಿಯಾಯಿತು. ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು ಈ ಪೈಕಿ 9 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಚೇತರಿಸಿಕೊಳ್ಳುತ್ತಿರುವುದಾಗಿ ಮೂಲಗಳು ತಿಳಿಸಿವೆ.
ಅಪಘಾತಕ್ಕೀಡಾದ ಬಸ್ ಸಂಪೂರ್ಣ ಜಖಂಗೊಂಡಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ