Latest

ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದ ರೈಲ್ವೆ ಪಾದಚಾರಿ ಮೇಲ್ಸೇತುವೆ; ಮಹಿಳೆ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಮುಂಬೈ: ರೈಲ್ವೆ ನಿಲ್ದಾಣದಲ್ಲಿನ ಪಾದಚಾರಿ ಮೇಲ್ಸೇತುವೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಮಹಿಳೆ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಬಾಲಹರ್ಷಾ ರೈಲು ನಿಲ್ದಾಣದಲ್ಲಿ ನಡೆದಿದೆ.

ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಓಡಾಡುವ 60 ಅಡಿ ಎತ್ತರದ ಮೇಲ್ಸೇತುವೆ ಏಕಾಏಕಿ ಕುಸಿದು ಬಿದ್ದಿದೆ. 20 ಪಾದಚಾರಿಗಳು ಗಾಯಗೊಂಡಿದ್ದರು. ತಕ್ಷಣ ರೈಲ್ವೆ ಸಿಬ್ಬಂದಿಗಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

Home add -Advt

48 ವರ್ಷದ ನೀಲಿಮಾ ರಂಗೇರಿ ಮೃತ ಮಹಿಳೆ. ನೀಲಿಮಾ ತಲೆಗೆ ಗಂಭೀರವಾಗಿ ಗಾಯಗಳಾಗಿದ್ದವು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಇನ್ನು ಗಂಭೀರವಾಗಿ ಗಾಯಗೊಂಡಿರುವವರಿಗೆ 1 ಲಕ್ಷ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ನಿದಲಾಗುವುದು ಎಂದು ಕೇಂದ್ರ ರೈಲ್ವೆ ಇಲಾಖೆ ಸಾರ್ವಜನಿಕ ಸಂಪರ್ಕ ಅಧಿಕರಿಗಳು ತಿಳಿಸಿದ್ದಾರೆ.
ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

https://pragati.taskdun.com/woman-dead-bodyfoundhome/

Related Articles

Back to top button