Kannada NewsKarnataka NewsLatest

ವ್ಯಾಯಾಮ ಶಾಲೆ ನಿರ್ಮಿಸಿಕೊಟ್ಟ​ ಲಕ್ಷ್ಮೀ ತಾಯಿ ಫೌಂಡೇಶನ್ 

ಪ್ರಗತಿವಾಹಿನಿ ಸುದ್ದಿ, ​ಬೆಳಗಾವಿ​: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಡಸ್ ಕೆ ಎಚ್ ಗ್ರಾಮದಲ್ಲಿ ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ 4 ಲಕ್ಷ ರೂ,ಗಳ ವೆಚ್ಚದಲ್ಲಿ ನೂತನವಾಗಿ ವ್ಯಾಯಾಮ ಶಾಲೆಯನ್ನು ನಿರ್ಮಿಸಲಾಗಿದ್ದು, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಜನರಿಗೆ ಸಮರ್ಪಿಸಿದರು.

ಗ್ರಾಮಸ್ಥರ ಬೇಡಿಕೆಯನ್ನು ಪರಿಗಣಿಸಿ ಗ್ರಾಮಕ್ಕೆ ವ್ಯಾಯಾಮ ಶಾಲೆಯನ್ನು ಕೊಡುಗೆಯಾಗಿ ನೀಡಿ​ರುವುದಾಗಿ ಲಕ್ಷ್ಮೀ ಹೆಬ್ಬಾಳಕರ್ ಈ ಸಂದರ್ಭದಲ್ಲಿ ತಿಳಿಸಿದರು.​ ಇದೇ ಸಮಯದಲ್ಲಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ​ದ ಶಾಸಕರು​ ಮಕ್ಕಳ ಆರೋಗ್ಯ ಹಾಗೂ ವಿದ್ಯಾಭ್ಯಾಸದ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಸಿ ಸಿ ಪಾಟೀಲ, ಅಡಿವೇಶ ಇಟಗಿ, ಸುರೇಶ ಇಟಗಿ, ಇನಾಯತ್ ಅತ್ತಾರ, ಪರ್ವತಗೌಡ ಪಾಟೀಲ, ಬಸಮಣ್ಣ ಶೀಗಿಹಳ್ಳಿ, ನ್ಯಾಯವಾದಿ ಗಿಡ್ಡಬಸನ್ನವರ, ಎಕ್ಸಿಕ್ಯೂಟಿವ್ ಇಂಜಿನಿಯರ್ ನಾಯ್ಕ್, ಗೌಸ್ ಸಿಂಪಿ, ಶಂಕರಗೌಡ ಪಾಟೀಲ, ಭೀಮಶಿ ಹಾದಿಮನಿ, ಕಲ್ಲಪ್ಪ ವನ್ನೂರ ಹಾ​ಗೂ​ ಕಾರ್ಯಕರ್ತರು ಉಪಸ್ಥಿತರಿದ್ದರು.
https://pragati.taskdun.com/road-work-at-a-cost-of-rs-10-crores-mla-lakshmi-hebbalkar-started-the-project-after-offering-prayers/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button