Latest

ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ್ ರಾವ್ ನಿಧನ: ಮುಖ್ಯಮಂತ್ರಿ ಸಂತಾಪ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನರಾಗಿದ್ದಾರೆ. 88 ವರ್ಷ ವಯಸ್ಸಿನ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಹಲವಾರು ಮೇಳಗಳಲ್ಲಿ ಕಲಾವಿದರಾಗಿ ಸುದೀರ್ಘ ಸೇವೆ ಸಲ್ಲಿಸಿದ್ದ ಸುಂದರ ರಾವ್, ಶಾಸಕರಾಗಿ, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಸಹ ಕೆಲಸ ಮಾಡಿದ್ದರು.

ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕುಂಬ್ಳೆ ಸುಂದರ್ ರಾವ್ ಅವರು ಐವತ್ತಕ್ಕೂ ಅಧಿಕ ವರ್ಷಗಳ ಕಾಲ ಯಕ್ಷಗಾನದಲ್ಲಿ ಸೇವೆ ಸಲ್ಲಿಸಿದ್ದಾರೆ. ಕುಂಬ್ಳೆ ಸುಂದರ ರಾವ್ ಮಾಜಿ ಶಾಸಕರೂ ಆಗಿದ್ದರು. ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 1994 ರಿಂದ 1999 ರವರೆಗೆ ಸುರತ್ಕಲ್ ಕ್ಷೇತ್ರದಿಂದ ಹತ್ತನೇ ಕರ್ನಾಟಕ ವಿಧಾನಸಭೆಯ ಬಿಜೆಪಿ ಸದಸ್ಯರಾಗಿದ್ದರು.

 

ಕುಂಬ್ಳೆ ಸುಂದರ ರಾವ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸುರತ್ಕಲ್ ಹಾಗೂ ಧರ್ಮಸ್ಥಳ ಮೇಳಗಳಲ್ಲಿ ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸಿದ್ದ ಅವರು ತಮ್ಮ ಪ್ರಾಸಬದ್ಧ , ನಿರರ್ಗಳ ಅರ್ಥಗಾರಿಕೆಯಿಂದ ಮನೆಂತಾಗಿದ್ದರು. ಶಾಸಕರಾಗಿ, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಅವರ ಸೇವೆ ಸ್ಮರಣೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸು ವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

 

ಬೆಳಗಾವಿಯಲ್ಲಿ ಬುಧವಾರ ಭಗವದ್ಗೀತಾ ಕಂಠಪಾಟ ಸ್ಪರ್ಧೆ

https://pragati.taskdun.com/bhagavadgeeta-compition-on-nov-30-in-belagavi/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button