Latest

ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು; ಸಿಎಂ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ವಿವಿಧ 10 ಜಿಲ್ಲೆಗಳಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ ಎಂಬ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿತ್ತು. ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ಆರಂಭಿಸಬೇಕು ಎಂಬ ವಕ್ಫ್ ಮಂಡಳಿ ಮನವಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಹೇಳಲಾಗಿತ್ತು. ಇದೀಗ ಸಿಎಂ ಬಸವರಾಜ್ ಬೊಮ್ಮಾಯಿ ಈ ಚರ್ಚೆಗೆ ಬ್ರೇಕ್ ಹಾಕಿದ್ದಾರೆ.

ಹಿಜಾಬ್ ನಿಷೇಧದ ಬಳಿಕ ಹಲವು ಮುಸ್ಲಿಂ ಹೆಣ್ಣು ಮಕ್ಕಳು ಕಾಲೇಜುಗಳಿಂದ ದೂರ ಉಳಿದಿದ್ದರು. ಅಲ್ಲದೇ ಪರೀಕ್ಷೆಗೂ ಹಾಜರಾಗದೇ ಗೈರಾಗುವ ಮೂಲಕ ಶಿಕ್ಷಣವನ್ನೇ ಮೊಟಕುಗೊಳಿಸಿದ್ದರು. ಮುಸ್ಲಿಂ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಕ್ಫ್ ಮಂಡಳಿ ವಿವಿಧ ಜಿಲ್ಲೆಗಳಲ್ಲಿ ಪ್ರತ್ಯೇಕ ಕಾಲೇಜು ಸ್ಥಾಮನೆಗೆ ಮನವಿ ಮಾಡಿತ್ತು. ಇದಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಕೂಡ ಸಹಮತ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ರಾಜ್ಯ ಸರ್ಕಾರ ಕೂಡ ಸಮ್ಮತಿ ನೀಡಿತ್ತು ಎನ್ನಲಾಗಿದೆ. ಈ ಎಲ್ಲಾ ಬೆಳವಣಿಗೆ ತೀವ್ರ ಚರ್ಚೆಗೆ ಕಾರಣವಾದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಸ್ಪಷ್ಟನೆ ನಿಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ಆರಂಭಿಸುವ ನಿಟ್ಟಿನಲ್ಲಿ ಯಾವುದೇ ಚರ್ಚೆಯೇ ನಡೆದಿಲ್ಲ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿಲ್ಲ. ವಕ್ಫ್ ಬೋರ್ಡ್ ನೀಡಿರುವ ಹೇಳಿಕೆ ವೈಯಕ್ತಿಕವಾದದ್ದು ಎಂದು ಹೇಳಿದ್ದಾರೆ.

ಈ ಮೂಲಕ ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ವಿವಾದಕ್ಕೆ ತೆರೆ ಬಿದ್ದಂತಾಗಿದೆ.

ಸಂಚಾರಿ ನಿಯಮ ಉಲ್ಲಂಘನೆ; ಬರೋಬ್ಬರಿ 6.5 ಕೋಟಿ ದಂಡ

https://pragati.taskdun.com/traffick-rulles-break6-5-crore-finehubli/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button