ಪ್ರಗತಿವಾಹಿನಿ ಸುದ್ದಿ; ವಿಜಯಪುರ: 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಪಿಎಂಸಿ ಲೆಕ್ಕಪರಿಶೋಧಕ ಲೋಕಾಯುಕ್ತ ಅಧಿಕಾರಿಗಳ ಬಲಗೆ ಬಿದ್ದ ಘಟನೆ ವಿಜಯಪುರದಲ್ಲಿ ನಡೆದಿದೆ.
ಶಂಕರಯ್ಯ ಲೋಕಾಯುಕ್ತರಿಂದ ಬಂಧಿಸಲ್ಪಟ್ಟ ಲೆಕ್ಕಪರಿಶೋಧಕ. ವಿಜಯಪುರದ ಎಪಿಎಂಸಿ ಆಂತರಿಕ ಲೆಕ್ಕಪರಿಶೋಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ಶಂಕರಯ್ಯ, ವ್ಯಕ್ತಿಯೊಬ್ಬರಿಗೆ ವ್ಯಾಪಾರ ಮಾಡಲು ಟ್ರೇಡಿಂಗ್ ಲೈಸನ್ಸ್ ನೀಡಲು 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು. ಈಗ ಶಂಕರಪ್ಪ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಅವರನ್ನು ಬಂಧಿಸಿದ್ದಾರೆ. ದಾಳಿ ವೇಳೆ ಹೆಚ್ಚುವರಿಯಾಗಿ 39,000 ರೂಪಾಯಿ ಹಣ ಸಿಕ್ಕಿದ್ದು, ಅದನ್ನೂ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
https://pragati.taskdun.com/siddaramaiahhospitalizedmanipal-hospital/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ