Kannada NewsLatest

ಗುಣಾತ್ಮಕ ಶಿಕ್ಷಣ ಒದಗಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು – ಶ್ರೀನಿವಾಸ ಶಿವಣಗಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 
ಬೆಳಗಾವಿ ಶಿಕ್ಷಣ ಸಂಸ್ಥೆಯ ಶ್ರೀಮತಿ ಉಷಾತಾಯಿ ಗೋಗಟೆ ಬಾಲಕಿಯರ ಪ್ರೌಢಶಾಲೆಯಲ್ಲಿ ಬುಧವಾರ   ಹಮ್ಮಿಕೊಳ್ಳಲಾಗಿದ್ದ ’ಪಾಲಕ ಶಿಕ್ಷಕರ ಸಭೆ’ಯಲ್ಲಿ ಸಂಸ್ಥೆಯ ಗೌರವ ಕಾರ್ಯದರ್ಶಿ ಶ್ರೀನಿವಾಸ ಶಿವಣಗಿ ಪಾಲಕರಿಗೆ ಹಾಗೂ ಶಿಕ್ಷಕರಿಗೆ ಮಾರ್ಗದರ್ಶನ ನೀಡಿದರು.

’ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವುದರಲ್ಲಿ ಶಿಕ್ಷಕರ ಜೊತೆ ಪಾಲಕರು ಕೈ ಜೋಡಿಸಿದರೆ ಮಕ್ಕಳು ಸರ್ವಾಂಗೀಣ ಅಭಿವೃದ್ದಿ ಹೊಂದಲು ಸಾಧ್ಯವಾಗುತ್ತದೆ. ಶಾಲೆಯಲ್ಲಿನ ಶಿಕ್ಷಕರು ಹಾಗೂ ಪಾಲಕರು ವಿದ್ಯಾರ್ಥಿಗಳಲ್ಲಿ ಒಳ್ಳೆಯ ಹವ್ಯಾಸಗಳು, ಮನೋಭಾವನೆ, ಪ್ರಾಮಾಣಿಕತೆ, ಶಿಸ್ತು ಮತ್ತು ಸಂಯಮ ಗುಣಗಳನ್ನು ಬೆಳೆಸಲು ಪ್ರಯತ್ನಿಸಬೇಕು ಎಂದು ಹೇಳಿದರು.

ಶಾಲೆಯಿಂದ ದೊರಕುವ ಗುಣಾತ್ಮಕ ಹಾಗೂ ಮೌಲ್ಯ ಶಿಕ್ಷಣದಿಂದ ಸುಸಂಸ್ಕೃತ ನಾಗರಿಕರಾಗಲು ಸಾಧ್ಯವಾಗುತ್ತದೆ. ಆದ್ದರಿಂದ ಮೌಲ್ಯಧಾರಿತ ಶಿಕ್ಷಣ ನೀಡಬೇಕೆಂದು ತಿಳಿಸಿದರು. ಅದೆ ರೀತಿ ೨೦೧೯-೨೦ ನೇ ಶೈಕ್ಷಣಿಕ ವರ್ಷದಿಂದ ೮ನೇ ತರಗತಿಯ ವಿದ್ಯಾರ್ಥಿನಿಯರಿಗೆ ಪ್ರಥಮ ಭಾಷೆ ಸಂಸ್ಕೃತ ವಿದ್ಯಾಭ್ಯಾಸ ಮಾಡುವ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾರ್ಗದರ್ಶಕರಾಗಿ ಬಿ. ಕೆ. ಮಾಡೆಲ್ ಹೈಸ್ಕೂಲಿನ ಸಂಸ್ಕೃತ ಪಂಡಿತರಾದ ಆರ್.ಎಸ್. ಭಟ್ ಉಪಸ್ಥಿತರಿದ್ದು ಸಂಸ್ಕೃತ ಭಾಷೆಯ ಮಹತ್ವ ತಿಳಿಸಿದರು. ೮ ನೇ ತರಗತಿಯ ೫೦ ವಿದ್ಯಾರ್ಥಿನಿಯರು ಪ್ರಥಮ ಭಾಷೆ ಸಂಸ್ಕೃತ ಕಲಿಯಲು ಆಸಕ್ತಿ ಹೊಂದಿದ್ದಾರೆ.

ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಆರಂಭವಾಯಿತು. ಶಾಲೆಯ ಮುಖ್ಯೋಪಾಧ್ಯಾಯ ಎಮ. ಕೆ. ಮಾದಾರ ಪ್ರಾಸ್ತಾವಿಕ ಮಾತನಾಡಿ, ಶಾಲೆಯಲ್ಲಿ ಮಕ್ಕಳಿಗೆ ದೊರೆಯುವ ಗುಣ್ಮಾತಕ ಶಿಕ್ಷಣದ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಮಕ್ಕಳು ಹಾಗೂ ಪಾಲಕರು, ಶಿಕ್ಷಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಈಶ್ವರಿ ಪಾಟೀಲ ನಿರೂಪಿಸಿ, ರಿಯಾ ಟಕಳೆ ಸ್ವಾಗತಿಸಿ,  ಸರಸ್ವತಿ ದೇಸಾಯಿ ವಂದನಾರ್ಪಣೆ ಮಾಡಿದರು. ವರ್ಗ ಶಿಕ್ಷಕ ಎಸ್.ಎಮ್.ಐವಳೆ ಹಾಗೂ ಎಮ್. ಆರ್. ಮೈತ್ರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕಾರ್ಯಕ್ರಮಕ್ಕೆ ವಿದ್ಯಾರ್ಥಿನಿಯರು ಹಾಗೂ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button