ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗದ ಮತ್ತೊಂದು ಜನಪ್ರಿಯ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದೆ. ಖ್ಯಾತ ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಸಿಂಹ ವಿವಾಹವಾಗಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಇತ್ತೀಚೆಗೆ ಕೆ ಐ ಎ ವಿಮಾನ ನಿಲ್ದಾಣದಲ್ಲಿ ಕೈಕೈ ಹಿಡಿದು ಓಡಾಡುತ್ತಿದ್ದ ಈ ಜೋಡಿ ವಿದೇಶ ಪ್ರವಾಸಕ್ಕೆ ತೆರಳಿದೆ ಎಂದು ಹೇಳಲಾಗುತ್ತಿತ್ತು.
ಇದೀಗ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಪರಸ್ಪರ ರಿಂಗ್ ಬದಲಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನಿನ್ನೆ ಮಧ್ಯಾಹ್ನ ನಟಿ ಹರಿಪ್ರಿಯಾ ಅವರ ಮನೆಯಲ್ಲಿ ಕುಟುಂಬದವರ ಸಮ್ಮುಖದಲ್ಲಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಇಬ್ಬರ ಎಂಗೇಜ್ ಮೆಂಟ್ ನೆರವೇರಿದೆ. ತುಂಬ ಸರಳವಾಗಿ ಶಾಸ್ತ್ರೋಕ್ತವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸಂಕ್ರಾಂತಿ ಬಳಿಕ ಈ ಜೋಡಿ ಹಸೆಮಣೆ ಏರಲಿದೆ ಎಂದು ತಿಳಿದುಬಂದಿದೆ.
ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿಷೇಧ
https://pragati.taskdun.com/tamilnadutemplemobile-banmadras-highcourt/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ