ಪ್ರಗತಿ ವಾಹಿನಿ ಸುದ್ದಿ, ಅಹ್ಮದಾಬಾದ್:
ಗುಜಾರತ್ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಈ ಬಾರಿಯೂ ಬಿಜೆಪಿ ಸ್ಪಷ್ಟ ಬಹುಮತ ಸಾಧಿಸಲಿದೆ ಎಂದು ಎಕ್ಸಿಟ್ ಪೋಲ್ ಫಲಿತಾಂಶ ಹೇಳಿದೆ. ಈ ಊಹೆ ನಿಜವಾದಲ್ಲಿ ಸತತ 7ನೇ ಬಾರಿಗೆ ಗುಜರಾತದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ.ಎಪಬ್ಲಿಕ್-ಪಿ ಎಕ್ಸಿಟ್ ಪೋಲ್ ಫಲಿತಾಂಶದ ಪ್ರಕಾರ ಒಟ್ಟು 182 ಸ್ಥಾನಗಳ ಪೈಕಿ ಬಿಜೆಪಿ 128-148 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್ 30-42 ಸ್ಥಾನಗಳನ್ನು ಗೆಲ್ಲಲಿದೆ. ಟಿವಿ 9 ಎಕ್ಸಿಟ್ ಪೋಲ್ ಫಲಿತಾಂಶದ ಪ್ರಕಾರ ಬಿಜೆಪಿ ಬಿಜೆಪಿ 125-130 ಸ್ಥಾನಗಳಲ್ಲಿ ಜಯ ಗಳಿಸಲಿದ್ದರೆ ಕಾಂಗ್ರೆಸ್ 40-50 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಲಿದೆ.
ಜಾನ್ ಕಿ ಬಾತ್ ಎಕ್ಸಿಟ್ ಪೋಲ್ ಪ್ರಕಾರ ಬಿಜೆಪಿ 117-140 ಸ್ಥಾನಗಳನ್ನು ಗೆಲ್ಲಲಿದ್ದು ಉಳಿದ ಸ್ಥಾನಗಳನ್ನು ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಗೆಲುವು ಸಾಧಿಸಲಿವೆ.
ಚುನಾವಣಾ ಫಲಿತಾಂಶ ಡಿ.8ರಂದು ಘೋಷಣೆಯಾಗಲಿದ್ದು, ಈಗ ಎಲ್ಲರ ಕಣ್ಣು ಗುಜರಾತ ಫಲಿತಾಂಶದತ್ತ ನೆಟ್ಟಿದೆ.
ಹಿರಿಯ ನಿರ್ದೇಶಕ ಭಗವಾನ್ ಆಸ್ಪತ್ರೆಗೆ ದಾಖಲು; ಆರೋಗ್ಯ ಸ್ಥಿತಿ ಗಂಭೀರ
https://pragati.taskdun.com/directorbhagawanhospitalized/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ