Kannada NewsLatestUncategorized

ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿದ್ದು, ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾವುಂಟಾಗಿದೆ. ಪರಿಣಾಮ ಕರ್ನಾಟಕ, ತಮಿಳುನಾಡು, ಆಂಧ್ರದ ಹಲವೆಡೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ಬೆಳಗಾವಿ, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 10ರವರೆಗೂ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ.

Home add -Advt

ನಾಳೆ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕೋಲಾರ, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಡಿಸೆಂಬರ್ 9ರಂದು ವಿಜಯಪುರ, ಯಾದಗಿರಿ, ಗದಗ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಡಿ.10ರಂದು ಉಡುಪಿ, ಕೊಡಗು, ಕೋಲಾರ, ರಾಮನಗರ, ಬೀದರ್, ಕಲಬುರ್ಗ, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
100 ವಾಹನಗಳಲ್ಲಿ ಕರವೇ ಬೆಳಗಾವಿಗೆ; 1000 ಕನ್ನಡ ಬಾವುಟ ಹಾರಾಟ

https://pragati.taskdun.com/belagavi1000-kannada-flagkaravavenarayanagowda/

Related Articles

Back to top button