
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಶಾಂತ್ ನೀಲ್ ನಿರ್ದೇಶನದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಜನಪ್ರಿಯ ಚಿತ್ರ ಕೆಜಿಎಫ್ ಸಿನಿಮಾದಲ್ಲಿ ಗಮನ ಸೆಳೆದಿದ್ದ ತಾತ ಕೃಷ್ಣರಾವ್ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣರಾವ್ ಅವರಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಗಿರಿನಗರ ಬಳಿಯ ಸೀತಾಸರ್ಕಲ್ ನಲ್ಲಿನ ವಿನಾಯಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿಸೆ ಫಲಕಾರಿಯಾದದೇ ಕೃಷ್ಣರಾವ್ ಇಂದು ಕೊನೆಯುಸಿರೆಳೆದಿದ್ದಾರೆ.
ಕೆಜಿಎಫ್ ಚಿತ್ರದಲ್ಲಿ ಅಂಧನ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಕೃಷ್ಣರಾವ್ ಅಭಿನಯ ಜನಮೆಚ್ಚುಗೆಗೆ ಪಾತ್ರವಾಗಿತ್ತು. ಕೆಲ ಸಮಯ ಮಾತ್ರ ಚಿತ್ರದಲ್ಲಿ ಬಂದು ಹೋಗುವ ಪಾತ್ರವಾದರೂ ಕೃಷ್ಣರಾವ್ ಅವರ ಅಭಿನಯ ಜನಮಾನಸದಲ್ಲಿ ಅಚ್ಚಳಿಯದಂತೆ ಮಾಡಿತ್ತು.
ಕೃಷ್ಣರಾವ್ ಶಂಕರ್ ನಾಗ್ ಅವರೊಂದಿಗೆ ಕೆಲಸ ಮಾಡಿದ್ದರು. ಅಲ್ಲದೇ ಹಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ, ಪೋಷಕ ನಟರಾಗಿ ಕಾಣಿಸಿಕೊಂಡಿದ್ದರು. ಕೃಷ್ಣರಾವ್ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.
ನಾರಾಯಣ ದೇವಾಲಯ-ಉಚಿತ ನೇತ್ರ ಚಿಕಿತ್ಸಾ ಕೇಂದ್ರ ಉದ್ಘಾಟಿಸಿದ ಸಿಎಂ
https://pragati.taskdun.com/narayan-templefree-eye-treatment-centerinauguratedcm-basavaraj-bommai/