LatestUncategorized

ಗುಜರಾತ್ ಸಿಎಂ ಭುಪೇಂದ್ರ ಪಟೇಲ್ ಭಾರಿ ಮುನ್ನಡೆ

ಪ್ರಗತಿವಾಹಿನಿ ಸುದ್ದಿ; ಅಹಮದಾಬಾದ್: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣಾ ಮತ ಎಣಿಕೆ ಬರದಿಂದ ಸಾಗಿದ್ದು, ಗುಜರಾತ್ ನಲ್ಲಿ ಬಿಜೆಪಿ ಭಾರಿ ಮುನ್ನಡೆ ಕಾಯ್ದುಕೊಂಡಿದೆ.

ಇತ್ತೀಚಿನ ಮಾಹಿತಿ ಪ್ರಕಾರ ಗುಜರಾತ್ ನಲ್ಲಿ 153 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. 24ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು, 5 ಕ್ಷೇತ್ರಗಳಲ್ಲಿ ಆಪ್ ಹಾಗೂ 4 ಕ್ಷೇತ್ರಗಳಲ್ಲಿ ಇತರ ಅಭ್ಯರ್ಥಿಗಳು ಮುನ್ನಡೆಯಲಿದ್ದಾರೆ.

Home add -Advt

ಗುಜರಾತ್ ನಲ್ಲಿ ಸಿಎಂ ಭುಪೇಂದ್ರ ಪಟೇಲ್ ಭಾರಿ ಮುನ್ನಡೆ ಕಾಯ್ದುಕೊಂಡಿದ್ದು, 23,713ಕ್ಕೂ ಅಧಿಕ ಮತಗಳಿಂದ ಮುನ್ನಡೆಯಲಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ 33 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ 33 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇತರೆ ಅಭ್ಯರ್ಥಿಗಳು 4 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ.

ಗುಜರಾತ್ ನಲ್ಲಿ ಬಿಜೆಪಿ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುನ್ನಡೆ

https://pragati.taskdun.com/gujarathhimachalapradeshaelection-resultvote-counting/

Related Articles

Back to top button