Latest

ಬುರ್ಖಾ ಧರಿಸಿ ಐಟಂ ಸಾಂಗ್ ಗೆ ಕುಣಿದು ಕುಪ್ಪಳಿಸಿದ ವಿದ್ಯಾರ್ಥಿನಿಯರು; ನಾಲ್ವರು ಎಂಜಿನಿಯರಿಂಗ್ ಸ್ಟುಡೆಂಟ್ಸ್ ಸಸ್ಪೆಂಡ್

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಕಾಲಾಜೇನ ಕಾರ್ಯಕ್ರಮದಲ್ಲಿ ನಾಲ್ವರು ಮುಸ್ಲಿಂ ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಹಿಂದಿ ಐಟಂ ಸಾಂಗ್ ಗೆ ಡ್ಯಾನ್ಸ್ ಮಾಡಿ ಕುಣಿದು ಕುಪ್ಪಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ವಾಮಂಜೂರಿನ ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಕಾಲೇಜಿನ ಬೇರೊಂದು ಕಾರ್ಯಕ್ರಮದ ವೇಳೆ ಏಕಾಏಕಿ ನಾಲ್ವರು ಬುರ್ಖಾಧಾರಿ ವಿದ್ಯಾರ್ಥಿನಿಯರು ಐಟಂ ಸಾಂಗ್ ಗೆ ಡ್ಯಾನ್ಸ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಭಾರಿ ವೈರಲ್ ಆಗಿದೆ. ಅಲ್ಲದೇ ಮುಸ್ಲಿಂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಅನುಮತಿಯಿಲ್ಲದೇ ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ಐಟಂ ಹಾಡಿಗೆ ಹೆಜ್ಜೆ ಹಾಕಿದ್ದು ನಿಯಮ ಬಾಹಿರ. ಕಾಲೇಜಿನಲ್ಲಿ ಇಂತಹ ಡ್ಯಾನ್ಸ್ ಗಳಿಗೆ ಅವಕಾಶ ನೀಡುವುದಿಲ್ಲ. ನಿಯಮ ಉಲ್ಲಂಘನೆ ಮಾಡಿ ವಿದ್ಯಾರ್ಥಿನಿಯರು ನೃತ್ಯ ಮಾಡಿದ್ದಕ್ಕೆ ಕಾಲೇಜು ಪ್ರಾಂಶುಪಾಲ ಡಾ.ಸುಧೀರ್ ನಾಲ್ವರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಗಡಿ ವಿವಾದದ ಬೆನ್ನಲ್ಲೇ ಭಾಷಾಧ್ವೇಷದ ಕಿಚ್ಚು; ಅಧಿವೇಶನದಂದೇ ಬೆಳಗಾವಿಯಲ್ಲಿ ಮಹಾಮೇಳಾವ್ ಆಯೋಜಿಸಿದ MES

https://pragati.taskdun.com/karnataka-maharashtra-border-isuebelagavimesmahamelavdecember-19/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button