Kannada NewsLatest
ರೈಲ್ವೆ ಯೋಜನೆ: ಜನಪ್ರತಿನಿಧಿಗಳೊಂದಿಗೆ ಚರ್ಚೆ
ಪ್ರಗತಿವಾಹಿನಿ ಸುದ್ದಿ , ಬೆಳಗಾವಿ:
ರೈಲ್ವೆ ಯೋಜನೆಗಳನ್ನು ಜಾರಿಗೊಳಿಸುವ ಸಂಬಂಧ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೆಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಸೇರಿದಂತೆ ಎಲ್ಲೆಡೆ ಹೊಸ ರೈಲುಗಳಿಗೆ ಬೇಡಿಕೆ ಇದೆ. ಇದಕ್ಕೆ ರಾಜ್ಯ ಸರ್ಕಾರದ ಸಹಕಾರವೂ ಬೇಕಾಗುತ್ತದೆ. ಎಲ್ಲವನ್ನೂ ಚರ್ಚಿಸಿ ಯೋಜನೆ ಜಾರಿ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಸ್ವಚ್ಛತೆ, ಸಮಯ ಪಾಲನೆ ಮತ್ತು ಸುರಕ್ಷತೆಗೆ ರೈಲ್ವೆ ಇಲಾಖೆ ಆದ್ಯತೆ ನೀಡಲಿದೆ ಎಂದು ಅಂಗಡಿ ಹೇಳಿದರು.




