ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತೀವ್ರ ಸ್ವರೂಪ ಪಡೆದ ಬೆನ್ನಲ್ಲೇ ಸ್ಥಗಿತಗೊಂಡಿದ್ದ ಎರಡು ರಾಜ್ಯಗಳ ನಡುವಿನ ಬಸ್ ಸಂಚಾರ ಇಂದಿನಿಂದ ಆರಂಭವಾಗಿದೆ.
ಮಹಾರಾಷ್ಟ್ರದಲ್ಲಿ ಕೆ ಎಸ್ ಆರ್ ಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ ಹಾಗೂ ಬೆಳಗಾವಿಯಲ್ಲಿ ಮಹಾರಾಷ್ಟ್ರ ಪುಂಡರ ವಿರುದ್ಧ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ, ಆಕ್ರೋಶಗಳ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಕರ್ನಾಟಕ-ಮಹಾರಾಷ್ಟ್ರ ನಡುವಿನ ಸಾರಿಗೆ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ಕಳೆದ ಎರಡು ದಿನಗಳಿಂದ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ತೆರಳಬೇಕಿದ್ದ ಬಸ್ ಗಳು ಹಾಗೂ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸಬೇಕಿದ್ದ ಹಲವು ಬಸ್ ಗಳು ರದ್ದಾಗಿದ್ದವು. ಇದೀಗ ಗಡಿ ವಿವಾದ ಕೊಂಚ ತಣ್ಣಗಾಗುತ್ತಿದ್ದಂತೆ ಬಸ್ ಸಂಚಾರ ಆರಂಭಗೊಂಡಿದೆ.
ಬೆಳಗಾವಿ, ಚಿಕ್ಕೋಡಿಯಿಂದ ಮಹಾರಾಷ್ಟ್ರಕ್ಕೆ ಬಸ್ ಗಳು ಪುನರಾರಂಭವಾಗಿದ್ದು, 400ಕ್ಕೂ ಹೆಚ್ಚು ಬಸ್ ಗಳು ಸಂಚಾರ ನಡೆಸಿವೆ. ಬೆಳಗಾವಿಯಿಂದ ನಾಸಿಕ್, ಪುಣೆ, ಮುಂಬೈ, ಮೀರಜ್, ಔರಂಗಾಬಾದ್, ಸಿಂಧದುರ್ಗದತ್ತ ಬಸ್ ಸಂಚಾರ ಆರಂಭವಾಗಿವೆ. ಕರ್ನಾಟಕ-ಮಹಾರಾಷ್ಟ್ರಗಡಿಯಲ್ಲಿ ಪೊಲೀಸರು ಹೆಚ್ಚಿನ ನಿಗಾ ವಹಿಸಿದ್ದಾರೆ ಎಂದು ತಿಳಿದುಬಂದಿದೆ.
RSS ನಾಯಕ ಮುಕುಂದ್- ಸಿಎಂ ಬೊಮ್ಮಾಯಿ ದಿಢೀರ್ ಭೇಟಿ
https://pragati.taskdun.com/cm-basavaraj-bommairss-leader-mukundmeetminstersmlas-meeting/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ