ಪ್ರಗತಿ ವಾಹಿನಿ ಸುದ್ದಿ, ಬೆಳಗಾವಿ:
ತುರ್ತು ನಿರ್ವಹಣಾ ಕಾರ್ಯದ ನಿಮಿತ್ತ ಡಿ. 10ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಖಾನಾಪುರ:
ತುರ್ತು ನಿರ್ವಹಣಾ ಕಾರ್ಯದ ನಿಮಿತ್ತ ಡಿ. 10ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 33 ಕೆವಿ ಖಾನಾಪುರ ಉಪಕೇಂದ್ರದಿಂದ ಸರಬರಾಜು ಆಗುವ ಖಾನಾಪುರ ಪಟ್ಟಣ, ಶಿವಾಜಿ ನಗರ, ರುಮೇವಾಡಿ, ಕರಂಬಳ, ಕೌಂದಲ, ಝಾಡನಾವಗಾ, ಲಾಲವಾಡಿ, ಹೆಬ್ಬಾಳ, ನಂದಗಡ, ಕಸಬಾ ನಂದಗಡ, ಕಾರಲಗಾ, ಶಿವೋಳ್ಳಿ, ಚಾಪಗಾಂವ, ಓತೋಳ್ಳಿ,
ಮೊದೇಕೊಪ್ಪ, ನಾಗುರ್ಡಾ, ರಾಮಗುರವಾಡಿ, ಅಂಬೋಳಿ, ಹರಸನವಾಡಿ, ಅಸೋಗಾ, ನೇರಸಾ, ಅಶೋಕ ನಗರ, ಮಂತುರ್ಗಾ, ಶೇಡೇಗಾಳಿ ಹಾಗೂ ಹೆಮ್ಮಡಗಾ ಪ್ರದೇಶಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‍ಸೆಟ್‍ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ನಗರ
33/11ಕೆವಿ ಉಪಕೇಂದ್ರ ಆರ್.ಎಂ-1 ಬೆಳಗಾವಿಯಲ್ಲಿ ತುರ್ತು ನಿರ್ವಹಣೆ ಕಾರ್ಯದ ಪ್ರಯುಕ್ತ ಈ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬೆಳಗಾವಿ ನಗರದ ಖಾನಾಪುರ ರಸ್ತೆ, 3ನೇ ಗೇಟ್, ಎಸ್.ವಿ.ಕಾಲೋನಿ, ಚಿದಂಬರ್ ನಗರ, ಮೃತ್ಯುಂಜಯ ನಗರ ಟೈನಿ ಇಂಡಸ್ಟ್ರೀಯಲ್ ಎರಿಯಾ,
ರೋಹಿದಾಸ ಕಾಲೋನಿ, ಉದ್ಯಮಬಾಗ ಇಂಡಸ್ಟ್ರೀಯಲ್ ಎರಿಯಾ, ಕೆ.ಎಲ್.ಇ.ಕಾಲೇಜ್ ರಸ್ತೆ, ಬಡಮಂಜಿ ಮಾಳ, ಮಜಗಾವ ಇಂಡಸ್ಟ್ರೀಯಲ್ ಎರಿಯಾ, ಬ್ರಹ್ಮ ನಗರ, ಜೈನ್ ಇಂಜಿನಿಯರಿಂಗ್ ಕಾಲೇಜ್, ಗಜಾನನ ನಗರ, ಗಾವಡೆ ಲೇಔಟ್ ಪ್ರದೇಶಗಳಲ್ಲಿ ಡಿ.11ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಅಧಿಕಾರಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ