*ಅವರು ಮನೆಗೆ ಹೋಗುವ ಕಾರ್ಯಕ್ರಮವಿದೆ ಅದಕ್ಕೆ ಹಾಗೇ ಹೇಳಿಕೆ ನೀಡುತ್ತಿದ್ದಾರೆ; ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಸಿಎಂ*
ಪ್ರಗತಿವಾಹಿನಿ ಸುದ್ದಿ; ಮೈಸೂರು: ನಾವು ಸುಮ್ಮನೇ ಕುಳಿತಿದ್ದರೂ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಗುಜರಾತ್ ನಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಅದೇ ಮಾದರಿ ಫಲಿತಾಂಶ ಮರುಕಳಿಸುವ ಸಾಧ್ಯತೆ ಬಗ್ಗೆ ಚರ್ಚೆ ವಿಚಾರವಾಗಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ಗುಜರಾತ್ ಚುನಾವಣೆಯೇ ಬೇರೆ, ಕರ್ನಾಟಕದ ಚುನಾವಣೆಯೇ ಬೇರೆ, ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ, ಭ್ರಷ್ಟ ಬಿಜೆಪಿ ಆಡಳಿತಕ್ಕೆ ಜನರು ಬೇಸತ್ತಿದ್ದಾರೆ. ಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ನಾವು ಸುಮ್ಮನೇ ಕುಳಿತಿದ್ದರೂ ಇಲ್ಲಿ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದು ಹೇಳಿದ್ದರು. ಸಿದ್ದರಾಮಯ್ಯ ಹೇಳಿಕೆಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, 2023ರ ಮೇ ನಂತರ ಸಿದ್ದರಾಮಯ್ಯನವರು ಮನೆಗೆ ಹೋಗುವ ಕಾರ್ಯಕ್ರಮವಿದೆ. ಹಾಗಾಗಿ ಅವರು ಆ ರೀತಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಹೇಳಿದರು.
ಗುಜರಾತ್ ಚುನಾವಣೆ ಬಳಿಕ ಸಹಜವಾಗಿ ಕರ್ನಾಟಕದ ಬಗ್ಗೆ ಚರ್ಚೆಯಾಗುತ್ತಿದೆ. ನಾವು ಸಂಘಟನೆ ದೃಷ್ಟಿಯಿಂದ ಎಲ್ಲಾ ತಯಾರಿ ನಡೆಸುತ್ತಿದ್ದೇವೆ. ಹಳೆ ಮೈಸೂರು ಭಾಗದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದರು.
ಈ ಬಾರಿ ಚುನಾವಣೆಯಲ್ಲಿ ಬಹುದೊಡ್ಡ ಸಂಖ್ಯೆಯಲ್ಲಿ ಬಿಜೆಪಿ ಶಾಸಕರು ಗೆದ್ದು ಬರಲಿದ್ದಾರೆ,ಕಾದುನೋಡಿ ಎಂದು ಹೇಳಿದರು.
*ಏಕಾಏಕಿ ಮನೆಗೆ ನುಗ್ಗಿ ವೈದ್ಯೆಯನ್ನೇ ಕಿಡ್ನ್ಯಾಪ್ ಮಾಡಿದ ದುಷ್ಕರ್ಮಿಗಳು; ಅಪಹರಣದ ವಿಡಿಯೋ ವೈರಲ್*
https://pragati.taskdun.com/over-100-men-storm-into-housekidnap-lady-doctorattack-familytelangana16-arrested/
*ದೇವಾಲಯಗಳಲ್ಲಿ ಆರತಿ ರದ್ದಾಗಿಲ್ಲ ಆದರೆ…ಸ್ಪಷ್ಟನೆ ನೀಡಿದ ಸಚಿವೆ ಶಶಿಕಲಾ ಜೊಲ್ಲೆ*
https://pragati.taskdun.com/shashikala-jolleclarificationsalam-aratiname-change/
*ಉತ್ತರ ಕನ್ನಡ ವಿಭಜನೆ ವಿಚಾರ; ಸಚಿವ ಶಿವರಾಮ್ ಹೆಬ್ಬಾರ್ ಸ್ಪಷ್ಟನೆ*
https://pragati.taskdun.com/uttara-kannadadividesirsiseparate-districtshivaram-hebbar/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ