ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಾಂಡೌಸ್ ಚಂಡಮಾರುತವುಂಟಾದ ಪರಿಣಾಮ ರಾಜ್ಯದಲ್ಲಿ ಇನ್ನೂ 5 ದಿಅಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ರಾಜ್ಯದ 15 ಜಿಲ್ಲೆಗಳಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಕೋಲಾರ, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಬೀದರ್, ಧಾರವಾಡ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬೆಳಗಾವಿ, ಬೀದರ್, ಕಲಬುರ್ಗಿ, ಹಾವೇರಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ.
ಮುಂದಿನ 24 ಗಂಟೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಹಲವೆಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಚಂಡಮಾರುತದ ಪರಿಣಾಮ ಚಿಕ್ಕಮಗಳೂರಿನಲ್ಲಿ ಶೀತ ಗಾಳಿ, ಮಳೆಯಿಂದಾಗಿ ಕಾಫಿ ಬೆಳೆ ನಾಶವಾಗುತ್ತಿದೆ. ಕರಾವಳಿ ಜಿಲ್ಲೆ, ಶಿವಮೊಗ್ಗ ಭಾಗದಲ್ಲಿಯೂ ಅಡಿಕೆ ಬೆಳೆಗಾರರಿಗೆ ಸಮಸ್ಯೆಯನ್ನು ತಂದೊಡ್ಡಿದೆ .
ರಾಜಧಾನಿ ಬೆಂಗಳೂರಿನಲ್ಲಿ ಶೀತಗಾಳಿ ಜಿಟಿ ಜಿಟಿ ಮಳೆಗೆ ಬೆಂಗಳೂರಿಗರು ಹೈರಾಣಾಗಿದ್ದು, ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ಡಿಸೆಂಬರ್ 16ರವರೆಗೂ ಮುಂದುವರೆಯಲಿರುವುದು ಸಂಕಷ್ಟಕ್ಕೆ ಕಾರಣವಾಗಿದೆ.
*ಬೆಳಗಾವಿ ಕೇಂದ್ರಾಡಳಿತ ಪ್ರದೇಶಕ್ಕೆ ಒತ್ತಾಯಿಸಿದ ಮರಾಠಿ ಸಾಹಿತ್ಯ ಸಮ್ಮೇಳನ*
https://pragati.taskdun.com/marathi-sahitya-sammelan-held-in-belagundi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ