ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಂಡೌಸ್ ಚಂಡಮಾರುತದ ಅಬ್ಬರಕ್ಕೆ ರಾಜ್ಯದಲ್ಲಿಯೂ ಭಾರಿ ಮಳೆ, ಶೀತಗಾಳಿ ಹೆಚ್ಚುತ್ತಿದ್ದು ಜನರು ತತ್ತರಿಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಿಪರೀತ ಗಾಳಿ, ಮಳೆಯಾಗುತ್ತಿದ್ದು, ಜನರು ಆರೋಗ್ಯ ಸಮಸ್ಯೆಗಳಿಗೀಡಾಗುತ್ತಿದ್ದಾರೆ. ಆಸ್ಪತ್ರೆಗಳಿಗೆ ಅಲೆದಾಡುವವರ ಸಂಖ್ಯೆ ಒಂದೇ ಸಮನೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಸುಧಾಕರ್ ರಾಜ್ಯದ ಜನತೆಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಚಳಿಗಾಲದ ಜೊತೆಗೆ ಚಂಡಮಾರುತದ ಪರಿಣಾಮವಾಗಿ ರಾಜ್ಯದಲ್ಲಿ ಹಲವೆಡೆ ಮಳೆ, ಶೀತಗಾಳಿ ಬೀಸುತಿದೆ. ಇದು ಜನರ ಆರೋಗ್ಯ ಹದಗೆಡುವಂತೆ ಮಾಡುತ್ತಿದೆ. ಶೀತಗಾಳಿ, ಮಳೆಯಿಂದಾಗಿ ಹಲವರು ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿದ್ದಾರೆ. ಮಕ್ಕಳು, ವೃದ್ಧರು ಮಾತ್ರವಲ್ಲ ರಾಜ್ಯದ ಜನತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುಮುವುದು ಮುಖ್ಯ. ಹೆಚ್ಚು ಬೆಚ್ಚಗಿರುವಂತೆ ನೋಡಿಕೊಳ್ಳಿ. ಈಗಾಗಲೇ ಆರೋಗ್ಯ ಇಲಾಖೆಯಿಂದಲೂ ಮಾರ್ಗಸೂಚಿ ಹೊರಡಿಸಲಾಗಿದೆ ಎಂದರು.
ಚಳಿಗೆ ಹಾಗೂ ಕೋವಿಡ್ ಸೋಂಕಿಗೂ ಯಾವುದೇ ಸಂಬಂಧವಿಲ್ಲ. ಪೋಷಕರು ಮಕ್ಕಳನ್ನು ಬಹಳ ಜಾಗರೂಕತೆಯಿಂದ ನೋಡಿಕೊಳ್ಳಬೇಕು. ಆರೋಗ್ಯ ಸಮಸ್ಯೆಗಳಿರುವವರು, ವೃದ್ಧರು ಆರೋಗ್ಯದ ಮೇಲೆ ಹೆಚ್ಚು ನಿಗಾವಹಿಸಿ ಎಂದು ಹೇಳಿದ್ದಾರೆ.
ಶೀತಗಾಳಿ, ಮಳೆ ಹೆಚ್ಚಾಗುತ್ತಿರುವುದರಿಂದ ಜನರಲ್ಲಿ ಉಸಿರಾಟದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಆಸ್ಪತ್ರೆಗಳಲ್ಲಿಯೂ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ವೈದ್ಯರ ಸಭೆ ಕರೆದು ಸೂಚಿಸಲಾಗುತ್ತಿದೆ. ಈಗಾಗಲೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಹೇಳಲಾಗಿದೆ. ಕೆಲವೆಡೆ ಶಾಲೆಗಳಿಗೆ ರಜೆ ನೀಡಲಾಗಿದೆ. ಆರೋಗ್ಯ ಇಲಾಖೆ ಎಲ್ಲಾ ರೀತಿಯ ಮುಂಜಾಗೃತಾ ಕ್ರಮಗಳನ್ನು ವಹಿಸುತ್ತಿದೆ ಎಂದು ತಿಳಿಸಿದರು.
*ಗುಡುಗು ಸಹಿತ ಭಾರಿ ಮಳೆ; 15 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
https://pragati.taskdun.com/karnatakarain5-daysalert/
*ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಮಕ್ಕಳು*
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ