
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ನ್ಯಾಯವಾದಿ ಮೇಲೆ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಎಸ್ ಐ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.
ನ್ಯಾಯವಾದಿ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಆರೋಪ ಎಸ್ ಐ ಸುತೇಶ್ ಮೇಲೆ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ ಐ ಸುತೇಶ್ ಅವರನ್ನು ಅಮಾನತುಗೊಳಿಸಿ ಪಶ್ಚಿಮ ವಲಯ ಡಿಐಜಿ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಜಾಗದ ವಿಚಾರವಾಗಿ ನ್ಯಾಯವಾದಿ ಕುಲದೀಪ್ ಶೆಟ್ಟಿ ಮನೆಗೆ ನುಗ್ಗಿದ್ದ ಪುಂಜಾಲಕಟ್ಟೆ ಠಾಣೆ ಪೊಲೀಸರು ಅವರ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಪೊಲಿಸರ ದೌರ್ಜನ್ಯ ಖಂಡಿಸಿ ಜಿಲ್ಲೆಯಾದ್ಯಂತ ವಕೀಲರು ಪ್ರತಿಭಟನೆ ನಡೆಸಿದ್ದರು.
ಹಲ್ಲೆ ಆರೋಪ ಪ್ರಕರಣದಲ್ಲಿ ಎಸ್ ಐ ಸುತೇಶ್ ಅವರನ್ನು ದಕ್ಷಿಣ ಕನ್ನಡ ಎಸ್ ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ಆದಾಗ್ಯೂ ಎಸ್ ಐ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ವಕಿಲರು ಹೋರಾಟ ನಡೆಸಿದ್ದರು. ರಾಜ್ಯ ಗೃಹ ಸಚಿವರಿಗೂ ಮನವಿ ಮಾಡಿದ್ದರು.
ಇದೀಗ ಎಸ್ ಐ ಸುತೇಶ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಡಿಜಿಐ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
*ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಮಕ್ಕಳು*
https://pragati.taskdun.com/shivamoggamurder-case5-arrested/
*ಉಸಿರಾಟದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ; ರಾಜ್ಯದ ಜನತೆಗೆ ಆರೋಗ್ಯ ಸಚಿವ ಸುಧಾಕರ್ ಎಚ್ಚರಿಕೆ*
https://pragati.taskdun.com/karnatakacold-windrainbreathing-problemminister-sudhakarwarning/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ