ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪರಿಶಿಷ್ಟ ಸಮುದಾಯಗಳತ್ತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಣ್ಣೋರಸುವುದಿರಲಿ, 5 ವರ್ಷಗಳ ಕಾಲ ಅವರ ಕಡೆ ತಿರುಗಿಯೂ ನೋಡಿರಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ರೇಸ್ ಕೋರ್ಸ್ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಒಳಮೀಸಲಾತಿಗೆ ಸಚಿವ ಸಂಪುಟ ಉಪಸಮಿತಿ ರಚಿಸಿರುವುದು ಕಣ್ಣೊರೆಸುವ ತಂತ್ರ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಈ ಕುರಿತ ವರದಿಯನ್ನು ತೆಗೆದು ನೋಡುವ ಧೈರ್ಯ ಸಿದ್ದರಾಮಯ್ಯ ಅವರಿಗೆ ಇರಲಿಲ್ಲ. ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಬರೀ ದೀಪ ಹಚ್ಚಿ ಮಾತನಾಡದೆ ಬಂದರು. ಇಂಥವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದರು.
ನಮ್ಮ ಬದ್ಧತೆ ಏನೆಂದು ಎಲ್ಲಾ ಸಮುದಾಯಗಳಿಗೆ ತಿಳಿದಿದೆ. ಕಾನೂನು ಸ್ಥಾನಮಾನವೂ ನಮಗೆ ತಿಳಿದಿದೆ. ಇಂಥ ಪ್ರಮುಖ ವಿಚಾರಗಳಲ್ಲಿ ನಿರ್ಣಯ ಕೈಗೊಳ್ಳುವ ದಿಟ್ಟತನ ಸರ್ಕಾರಕ್ಕಿದೆ ಎಂದು ತೋರಿಸಿದ್ದೇವೆ. ಇನ್ನೊಬ್ಬರ ಬಗ್ಗೆ ಮಾತನಾಡುವ ಮುನ್ನ ಸಿದ್ದರಾಮಯ್ಯ ಹಿಂತಿರುಗಿ ನೋಡಿದರೆ ಒಳ್ಳೇದು ಎಂದು ಹೇಳಿದರು.
*ಜನಾರ್ಧನ ರೆಡ್ಡಿ ರಾಜಕಾರಣಕ್ಕೆ ಮುನ್ನುಡಿಯಾಗಲಿದೆಯಾ ನೂತನ ಮನೆ ಗೃಹ ಪ್ರವೇಶ?*
https://pragati.taskdun.com/janardhana-reddyghuhapraveshagangavatikoppala/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ