ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನನ್ನು ವಿದ್ಯಾರ್ಥಿನಿಯರು ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿನ ರಾಣಿಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ.
ಆರೋಪಿ ಶಿಕ್ಷಕನನ್ನು ಬಂಧಿಸಿರುವ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಕಟ್ಟೇರಿ ಪ್ರೌಢಶಾಲೆ ಹಾಗೂ ಹೆಣ್ಣುಮಕ್ಕಳ ವಸತಿ ಶಾಲೆಯ ಉಸ್ತುವಾರಿ ಚಿನ್ಮಯಾನಂದ ಬಂಧಿತ ಶಿಕ್ಷಕ.
ತಡರಾತ್ರಿ ವಸತಿ ಶಾಲೆಗೆ ಆಗಮಿಸಿದ ಶಿಕ್ಷಕ ಚಿನ್ಮಯಾನಂದ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಕೆಲ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಲು ಯತ್ನಿಸಿದ್ದಾನೆ. ಶಿಕ್ಷಕನ ವರ್ತನೆಗೆ ರೊಚ್ಚಿಗೆದ್ದ ವಿದ್ಯಾರ್ಥಿನಿಯರು ಆತನನ್ನು ಹಿಡಿದು ಪೊರಕೆ, ದೊಣ್ಣೆಯಿಂದ ಧರ್ಮದೇಟು ಕೊಟ್ಟಿದ್ದಾರೆ. ವಿದ್ಯಾರ್ಥಿನಿಯರಿಂದ ತಪ್ಪಿಸಿಕೊಳ್ಳಲು ಓಡಿಹೋಗಲು ಯತ್ನಿಸಿದಾಗ ಹಾಸ್ಟೇಲ್ ಗೇಟ್ ಬಂದ್ ಮಾಡಿ ಥಳಿಸಿದ್ದಾರೆ.
ವಿದ್ಯಾರ್ಥಿನಿಯರ ಕೂಗಾಟ ಕೇಳಿ ಸ್ಥಳಕ್ಕೆ ಗ್ರಾಮಸ್ಥರು ಆಗಮಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿ, ಕಾಮುಕ ಶಿಕ್ಷಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
*PSI ನೇಮಕಾತಿ ಅಕ್ರಮ; ಪ್ರಮುಖ ಆರೋಪಿಗಳಿಗೆ ಜಾಮೀನು*
https://pragati.taskdun.com/psi-scamtwo-accusedbailkalaburgi-court/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ