ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ಚುನಾವಣಾ ಓಲೈಕೆ ತಂತ್ರವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಶಂಕಿತ ಮಂಗಳೂರಿನಲ್ಲಿ ಸ್ಫೋಟ ನಡೆಸುವ ಹುನ್ನಾರ ನಡೆಸಿದ್ದ ಎಂಬುದು ಬಯಲಾಗಿದೆ. ಈ ಹಿಂದೆ ಎರಡು ಮೂರು ಕೇಸ್ ನಲ್ಲಿ ಆತ ಭಾಗಿಯಾಗಿದ್ದ. ದೇಶದ ಹೊರಗೂ ಶಂಕಿತ ಉಗ್ರನಿಗೆ ಸಂಪರ್ಕ ಇತ್ತು ಎಂಬುದು ತಿಳಿದುಬಂದಿದೆ. ಹೀಗಿರುವಾಗ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಅವರಿಗೆ ಶೋಭೆ ತರಲ್ಲ ಎಂದು ಕಿಡಿಕಾರಿದರು.
ಚುನಾವಣೆಗಾಗಿ ಓಲೈಕೆಯ ರಾಜಕಾರಣ ಮಾಡುತ್ತಿದ್ದಾರೆ. ಹೀಗೆ ಹೇಳಿಕೆ ನೀಡಿದರೆ ಅಲ್ಪಸಂಖ್ಯಾತರ ಮತ ಬರುತ್ತೆ ಅಂತ ಡಿಕೆಶಿ ತಂತ್ರಗಾರಿಕೆ. ಕಾಂಗ್ರೆಸ್ ನವರು ಉಗ್ರರ ಪರವೋ? ದೇಶದ ಪರವೋ ಎಂಬುದನ್ನು ಮೊದಲು ರಾಹುಲ್ ಗಾಂಧಿಯವರು ಹಾಗೂ ಮಲ್ಲಿಕಾರ್ಜುನ ಖರ್ಗೆಯವರು ಸ್ಪಷ್ಟ ಪಡಿಸಲಿ ಎಂದು ಆಗ್ರಹಿಸಿದರು.
ಡಿ.ಕೆ.ಶಿವಕುಮಾರ್ ಒಂದು ಸಮುದಾಯದ ಓಲೈಕೆಗಾಗಿ ಈ ರೀತಿಯಾದ ಹೇಳಿಕೆ ಕೊಡುವುದು ಸರಿಯಲ್ಲ. ಇದು ದೇಶ ಭಕ್ತನ ಕೆಲಸವಲ್ಲ. ಜನ ಜಾಗೃತರಾಗಿದ್ದಾರೆ. ಇಂತಹ ತಂತ್ರಗಾರಿಕೆಗಳು ನಡೆಯುವುದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಭಯೋತ್ಪಾದಕರ ಪರವೋ ಅಥವಾ ದೇಶಭಕ್ತರ ಪರವೋ ಎನ್ನುವುದನ್ನು ಸ್ಪಷ್ಟಪಡಿಸಲಿ:
ಕಾಂಗ್ರೆಸ್ ಪಕ್ಷದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಯವರು, ದೇಶದಲ್ಲಿ ಅಶಾಂತಿ ಉಂಟುಮಾಡುವ ಭಯೋತ್ಪಾದಕರ ಪರವೋ ಅಥವಾ ದೇಶವನ್ನು ಉಳಿಸುವ ದೇಶಭಕ್ತರ ಪರವೋ ಎನ್ನುವುದನ್ನು ಸ್ಪಷ್ಟಪಡಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ವಿಜಯ ದಿವಸ್ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಕೆಪಿಸಿಸಿ ಅಧ್ಯಕ್ಷರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪ್ರತಿ ಬಾರಿ ದೇಶದ ನೈತಿಕತೆ, ಪೊಲೀಸ್ ಇಲಾಖೆಯ ನೈತಿಕತೆ ಕಡಿಮೆ ಮಾಡುವಂತೆ ಮಾತನಾಡುವುದು ದೇಶಭಕ್ತರ ಕೆಲಸವಲ್ಲ. ಇದನ್ನು ಸ್ಪಷ್ಟವಾಗಿ ಹೇಳಿದರೆ ಜನ ತೀರ್ಮಾನ ಮಾಡುತ್ತಾರೆ. ಭಯೋತ್ಪಾದಕರು ಸಾಕ್ಷಿ ಸಮೇತ ಸಿಕ್ಕಾಗ ಅದರ ಪ್ರಕ್ರಿಯೆ ಹಾಗೂ ತನಿಖೆಯನ್ನೇ ಪ್ರಶ್ನೆ ಮಾಡುವುದು ಭಯೋತ್ಪಾದಕ ಸಂಘಟನೆಗಳಿಗೆ ನೈತಿಕ ಬಲ ತಂದುಕೊಡುತ್ತದೆ ಎಂದರು.
ಶೋಭೆ ತರುವಂಥದ್ದಲ್ಲ
ಕುಕ್ಕರ್ ಬಾಂಬ್ ಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ ಒಬ್ಬ ವ್ಯಕ್ತಿ ಬಾಂಬ್ ಗೆ ಸಂಬಂಧಿಸಿದ ಎಲ್ಲಾ ವಸ್ತುಗಳನ್ನು ಕುಕ್ಕರ್ ನಲ್ಲಿ ಹಾಕಿಕೊಂಡು ಹೋಗುವಾಗ ಸ್ಪೋಟವಾಗಿದೆ. ಅದನ್ನು ಮಂಗಳೂರಿನಲ್ಲಿ ಸ್ಪೋಟ ಗೊಳಿಸುವ ಉದ್ದೇಶ ವಿತ್ತು ಎನ್ನುವುದು ಸ್ಪಷ್ಟವಾಗಿದೆ. ಆತ ತನ್ನ ಗುರುತನ್ನು ಮರೆಮಾಚಿ ಈಗಾಗಲೇ 2-3 ಪ್ರಕರಣಗಳಲ್ಲಿ ಸಿಕ್ಕಿಹಾಕಿಕೊಂಡಿದ್ದು, ಭಯೋತ್ಪಾದಕ ಎಂದ ಮೇಲೆ ದೇಶದ ಹೊರಗೂ ಸಂಪರ್ಕವಿತ್ತು ಎನ್ನುವುದು ಕೂಡ ಸ್ಪಷ್ಟ ಎಂದರು.
ತುಷ್ಟೀಕರಣದ ರಾಜಕಾರಣ
ಇಂಥ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರು ಅದು ಆಕಸ್ಮಿಕ, ಪ್ರಕರಣ ಮುಚ್ಚಿಹಾಕಲು ಮಾಡಿದ್ದಾರೆ ಎನ್ನುವುದು ನಿಜಕ್ಕೂ ಅವರಿಗೆ ಶೋಭೆ ತರುವಂಥದ್ದಲ್ಲ. ಅವರ ನೀತಿಯೇ ಹೀಗಿದೆ. ಭಯೋತ್ಪಾದಕ ಚಟುವಟಿಕೆಗಕನ್ನು ಕ್ಷುಲ್ಲಕ ವಾಗಿ ಕಾಣುವುದು, ಭಯೋತ್ಪಾದಕರಿಗೆ ಬೆಂಬಲ ನೀಡುವುದು, ಗಲ್ಲಿಗೇರಿಸಿದಾಗ ಟೀಕೆ ಮಾಡುವ ಅವರ ಪ್ರವೃತ್ತಿ, ಚುನಾವಣೆಯ ತುಷ್ಟೀಕರಣದ ತಂತ್ರ. ಈ ರೀತಿ ಮಾತನಾಡಿದರೆ ಅಲ್ಪಸಂಖ್ಯಾತರ ಮತಗಳು ದೊರಕಬಹುದೆಂಬ ಹಳೇ ತಂತ್ರ. ಅದನ್ನೇ ಬಳಕೆ ಮಾಡಿದ್ದಾರೆ. ಆದರೆ ಜನ ಜಾಗೃತರಾಗಿದ್ದು, ಇದೆಲ್ಲಾ ನಡೆಯೋಲ್ಲ ಎಂದರು.
ಕಾನೂನು ಬಾಹಿರವಾಗಿ ಮತ ಹಾಕಿಸುವ ಪ್ರವೃತ್ತಿ
ಡಿ.ಕೆ.ಶಿವಕುಮಾರ್ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿ 2017 ರಲ್ಲಿ ಆ ಸಂಸ್ಥೆ ಗೆ ಆಜ್ಞೆ ಕೊಟ್ಟಿದ್ದೆ ಕಾಂಗ್ರೆಸ್ ಎನ್ನುವುದನ್ನು ಡಿ.ಕೆ.ಶಿವಕುಮಾರ್ ಮರೆಯಬಾರದು. ಕಾನೂನು ಬಾಹಿರವಾಗಿ ಮತ ಹಾಕಿಸುವ ಪ್ರವೃತ್ತಿ ಕಾಂಗ್ರೆಸ್ಸಿಗಿದೆ. ನಾವು ತನಿಖೆ ಮಾಡಿಸಿ ಬಂಧನವೂ ಆಗಿದೆ. ಯಾವ ಕ್ಷೇತ್ರಗಳಲ್ಲಿ ಯಾವ ಪ್ರದೇಶಗಳಿಂದ ಬಂದಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ. ಚುನಾವಣೆ ಆಯೋಗ ಹೊಸ ತಾಂತ್ರಿಕ ವಿಧಾನವನ್ನು ಅಳವಡಿಸಿದ್ದು, ಫೋಟೋ ಮೂಲಕವೇ ಬೇರೆಡೆ ಮತದಾರರ ಚೀಟಿ ಹೊಂದಿದ್ದಾರೆ ಗುರುತಿಸಿ ತೆಗೆದುಹಾಕಲಾಗುವುದು ಎಂದರು.
*ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಂಧನ*
https://pragati.taskdun.com/attica-gold-compenybabuarrest/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ