
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜದಾನಿ ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಬಸವೇಶ್ವರ ನಗರದ ಮನೆಯಲ್ಲಿ ಟೆಕ್ಕಿ ನೇಣಿಗೆ ಕೊರಳೊಡ್ಡಿದ್ದಾರೆ. 26 ವರ್ಷದ ಸ್ವಾತಿ ಆತ್ಮಹತ್ಯೆಗೆ ಶರಣಾದವರು. ಗ್ಲೋಬಲ್ ವಿಲೇಜ್ ಐಟಿ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಸ್ವಾತಿ, ಪತಿಯ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
2 ವರ್ಷಗಳ ಹಿಂದೆ ದಾಮೋದರ್ ಎಂಬುವವರನ್ನು ವಿವಾಹವಾಗಿದ್ದ ಸ್ವಾತಿ ಪತಿಯೊಂದಿಗೆ ಬಸವೇಶ್ವರನಗರದಲ್ಲಿ ವಾಸವಾಗಿದ್ದರು. ಮಾನಸಿಕ ಖಿನ್ನತೆಯಿಂದ ಸ್ವಾತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಬಸವೇಶ್ವರನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
*ಸೈನಿಕರ ಕುಟುಂಬದವರಿಗೆ ಅಗತ್ಯ ನೆರವು ನೀಡಲು ಸರ್ಕಾರ ಬದ್ದ: ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ*
https://pragati.taskdun.com/cm-basavaraj-bommaaivijaya-diwasnational-soldier-memorial/