ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೊಸ ವರ್ಷಾಚರಣೆಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಗೃಹ ಸಚಿವ ಅರಗ ಜ್ಞಾನೇಂದ್ರ ಮಹತ್ವದ ಸಭೆ ನಡೆಸಿದರು.
ಸಭೆ ಬಳಿಕ ಮಾತನಾಡಿದ ಗೃಹ ಸಚಿವರು, ಸೇಫ್ ಸಿಟಿ ಪ್ರಾಜೆಕ್ಟ್ ಅಡಿ 4 ಸಾವಿರ ಸಿಸಿ ಕ್ಯಾಮರಾಗಳ ಅಳವಡಿಕೆ ಮಾಡಲಾಗಿದೆ. 4 ಸಂಚಾರಿ ಉಪ ವಿಭಾಗಗಳ ರಚನೆ ಮಾಡಲಾಗಿದೆ. 2 ಕಾನೂನು ಸುವ್ಯವಸ್ಥೆ ಉಪ ವಿಭಾಗಗಳನ್ನು ಮಾಡಲಾಗಿದೆ. ಕೇಂದ್ರ ಗೃಹ ಸಚಿವರನ್ನು ಕರೆತಂದು ಉದ್ಘಾಟನೆ ಮಾಡಲಾಗುವುದು ಎಂದರು.
ಬೆಂಗಳೂರು ಪೊಲೀಸರು ಸಾಕಷ್ಟು ಒಳ್ಳೆ ಕೆಲಸಗಳನ್ನು ಮಾಡಿದ್ದಾರೆ. 2022ರಿಂದ ಇದುವರೆಗೆ 78 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ. 68 ವಿದೇಶಿಗರನ್ನು ಗಡಿಪಾರು ಮಾಡಲಾಗಿದೆ. ಮೊಬೈಲ್ ಫೊರೆನಿಕ್ಸ್ ಲ್ಯಾಬ್ ಸ್ಥಾಪಿಸಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯವನ್ನು ಡಿಜಿಟಲ್ ಮಾಡಲಾಗಿದೆ. 50 ಜಂಕ್ಷನ್ ಗಳಲ್ಲಿ ಐಟಿಎಂಎಸ್ ಹಾಕಲಾಗಿದೆ. ವ್ಯವಸ್ಥಿತ ಸಂಚಾರ ನಿರ್ವಹಣೆಗಾಗಿ 58 ಕೋಟಿ ವೆಚ್ಚ ಮಾಡಲಾಗಿದೆ ಎಂದರು.
ಕೋವಿಡ್ ಕಾರಣಗಳಿಂದಾಗಿ ಎರಡು ವರ್ಷಗಳಿಂದ ಹೊಸ ವರ್ಷಾಚರಣೆ ಮಾದಲು ಸಾಧ್ಯವಾಗಿರಲಿಲ್ಲ. ಈ ವರ್ಷ ವರ್ಷಾಚರಣೆ ಜೋರಾಗಿ ಮಾಡುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಪೊಲಿಸ್ ಕಣ್ಗಾವಲಿಗೆ 4 ಸಾವಿರ ಕ್ಯಾಮರಾ ಅಳವಡಿಸಲಾಗಿದೆ. ಮಾದಕವಸ್ತು ಸೇವನೆ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು. ಅನುಮತಿ ಇಲ್ಲದೇ ಕ್ಲಬ್, ಪಬ್, ಕ್ಯಾಬರೆ ತೆಗೆದಿದ್ದರೆ ಮುಚ್ಚಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
*46 ಸಾವಿರ ನೇಕಾರರ ಕುಟುಂಬದ ಮಕ್ಕಳಿಗೆ ವಿದ್ಯಾನಿಧಿ ಯೋಜನೆ*
https://pragati.taskdun.com/nekar-samman-dbt-subsidy-transfercm-basavaraj-bommai/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ