Latest

ಯಡಿಯೂರಪ್ಪ ಸೇರಿ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

 

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು :

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಹೊರಟಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕರ್ನಾಟಕ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸುತ್ತಿದ್ದ ಬಿಜೆಪಿ ನಾಯಕರು ಸಿಎಂ ಗೃಹ ಕಚೇರಿಗೆ ಮುತ್ತಿಗೆ ಹಾಕಲು ತೆರಳುತ್ತಿದ್ದರು. ಮೌರ್ಯ ಸರ್ಕಲ್ ಬಳಿಯಿಂದ ಗಾಂಧಿ ಭವನದ ತನಕ ಪ್ರತಿಭಟನಾ ಜಾಥಾ ನಡೆಸಿದರು.

Home add -Advt

ಶಿವಾನಂದ ವೃತ್ತದ ಬಳಿಯ ಗಾಂಧಿ ಭವನದ ಮುಂದೆ ಬ್ಯಾರಿಕೇಡ್ ಹಾಕಿ ಪೊಲೀಸರು ಎಲ್ಲರನ್ನೂ ತಡೆದರು. ಬ್ಯಾರಿಕೇಡ್ ದಾಟಿ ಮುಂದೆ ಸಾಗಲು ಪ್ರಯತ್ನ ನಡೆಸಿದ ನಾಯಕರನ್ನು ವಶಕ್ಕೆ ಪಡೆದು, ಬಿಎಂಟಿಸಿ ಬಸ್‌ನಲ್ಲಿ ಪೊಲೀಸರು ಕರೆದುಕೊಂಡು ಹೋದರು.

ರಾಜ್ಯದಲ್ಲಿ ಬರ ಪರಿಹಾರ ನಿರ್ವಹಣೆ, ರೈತರ ಸಾಲ ಮನ್ನಾ ಯೋಜನೆ ಹಾಗೂ ಜಿಂದಾಲ್‌ ಸಂಸ್ಥೆಗೆ ಭೂಮಿ ಮಾರಾಟ ಕುರಿತಂತೆ ರಾಜ್ಯ ಸರ್ಕಾರದ ಕ್ರಮಗಳನ್ನು ಪ್ರತಿಭಟಿಸಿ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರು ಅಹೋರಾತ್ರಿ ಧರಣಿಯನ್ನು ಶುಕ್ರವಾರದಿಂದ ನಡೆಸುತ್ತಿದ್ದರು.

ಯಡಿಯೂರಪ್ಪಗೆ ಕುಮಾರಸ್ವಾಮಿ ಬರೆದ ಪತ್ರದಲ್ಲೇನಿದೆ?

ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸುತ್ತಿರುವ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಪತ್ರ ಬರೆದಿದ್ದರು. ಚರ್ಚೆ ನಡೆಸಲು ನಾನು ಸಿದ್ಧ ಎಂದು ಪತ್ರದಲ್ಲಿ ತಿಳಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button