Latest

ಎಂಇಎಸ್ ಹದ್ದುಬಸ್ತಿನಲ್ಲಿಡಲು ಸೂಕ್ತ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ: ಮಹಾರಾಷ್ಟ್ರಏಕೀಕರಣ ಸಮಿತಿ (MES)ಎಂಇಎಸ್ ಕಳೆದ 50 ವರ್ಷಗಳಿಂದ ಪುಂಡಾಟಿಕೆಯಲ್ಲಿ ತೊಡಗಿದೆ. ಅವರನ್ನು ನಿಯಂತ್ರಿಸುವ ಬಗ್ಗೆ ಸರ್ಕಾರಗಮನ ಹರಿಸುತ್ತಿದ್ದು, ಅವರ ಪುಂಡಾಟಿಕೆಯನ್ನು ಹದ್ದುಬಸ್ತಿನಲ್ಲಿಡುವ ಕೆಲಸವನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Home add -Advt

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಬೆಳಗಾವಿಯಲ್ಲಿ ಎಂಇಎಸ್ ಚಟುವಟಿಕೆಗಳ ಬಗ್ಗೆ ಪ್ರತಿಕ್ರಿಯಿಸಿದರು.

ನಾಳೆಯಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತಿದ್ದು, ಎಸ್ ಸಿ ಎಸ್ ಟಿ ಮೀಸಲಾತಿ ಮಸೂದೆ(Ordinance Replacement bill) ಸೇರಿದಂತೆ ಇತರ ಇಲಾಖೆಗಳ ಹಲವಾರು ಮಸೂದೆಗಳನ್ನು ಮಂಡಿಸಲಾಗುವುದು. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿದೆ ಎಂದು ಅವರು ಹೇಳಿದರು.

ಬಾಂಬ್ ಪ್ರಕರಣಕ್ಕೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯನವರ ಹೇಳಿಕೆಗೆ ಉತ್ತರ ನೀಡಿ, “ಅದೊಂದು ಆಕಸ್ಮಿಕ ಘಟನೆ” ಎಂದು ಸಿದ್ಧರಾಮಯ್ಯನವರು ಸ್ಪಷ್ಟವಾಗಿ ಹೇಳುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಪೂರ್ಣವಾಗಿ ಅರ್ಥೈಸಿಕೊಂಡು ನಂತರ ಪ್ರತಿಕ್ರಿಯೆ ನೀಡಿದರೆ ಸಿದ್ದರಾಮಯ್ಯನವರ ಸ್ಥಾನಕ್ಕೆ ಘನತೆ ಇರುತ್ತದೆ ಎಂದರು.

ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪ; ಬಿಜೆಪಿ ಮುಖಂಡ ವೆಂಕಟೇಶ ಮೌರ್ಯ ವಿರುದ್ಧ ಮಹಿಳೆಯರ ದೂರು

https://pragati.taskdun.com/accuse-of-ending-obscene-messages-complaint-of-women-against-bjp-leader-venkatesh-maurya/

Related Articles

Back to top button