Kannada NewsKarnataka News
ಬಿಜಗರಣಿ ಗ್ರಾಮದ ನೂತನ ಶ್ರೀ ಲಕ್ಷ್ಮೀ ದೇವಿ ಮಂದಿರದ ಲೋಕಾರ್ಪಣೆ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜಗರಣಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಲಕ್ಷ್ಮೀ ದೇವಿ ಮಂದಿರ ಕಟ್ಟಡದ ಉದ್ಘಾಟನೆ, ಕಳಸಾರೋಹಣ ಹಾಗೂ ಮೂರ್ತಿಯ ಪ್ರಾಣ ಪ್ರತಿಷ್ಠಾಪಣೆಯನ್ನು ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಮಂಗಳವಾರ ನೆರವೇರಿಸಿದರು.
ಈ ಸಮಯದಲ್ಲಿ ಗ್ರಾಮದ ಹಿರಿಯರು, ಯುವರಾಜ ಕದಂ, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಮನೋಹರ್ ಬೆಳಗಾಂವ್ಕರ್, ಯಲ್ಲಪ್ಪ ಬೆಳಗಾಂವ್ಕರ್, ಮನೋಹರ್ ಜಾಧವ್, ವಸಂತ ಅಷ್ಟೇಕರ್, ಶ್ರೀರಂಗ ಬಾಸ್ಕಳ, ಸಂದೀಪ ಅಷ್ಟೇಕರ್, ಮಹೇಶ ಪಾಟೀಲ, ನಿಂಗಪ್ಪ ಜಾಧವ್, ನಾಮದೇವ್ ಮೋರೆ ಹಾಗೂ ದೇವಸ್ಥಾನದ ಟ್ರಸ್ಟ್ ಕಮೀಟಿಯವರು ಉಪಸ್ಥಿತರಿದ್ದರು.
https://pragati.taskdun.com/mlas-lakshmi-hebbalkar-and-satish-jarakiholi-rushed-to-listen-to-the-problem/




