ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬಿಜೆಪಿ “ಭಾರತ್ ಜೋಡೋ” ಯಾತ್ರೆಯನ್ನು “ಭಾರತ್ ತೋಡೋ”ಎಂದು ಲೇವಡಿ ಮಾಡಿದ ಹಿನ್ನೆಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡುವ ಸಂದರ್ಭದಲ್ಲಿ ರಾಜಸ್ಥಾನದ ಅಲ್ಬಾರ್ ನಲ್ಲಿ ಮಾತನಾಡುತ್ತಾ, ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವುದರಲ್ಲಿ ಶ್ರಮಿಸಿದೆ. ಇಂದಿರಾಗಾಂಧಿ ,ರಾಜೀವ್ ಗಾಂಧಿ ಸೇರಿದಂತೆ ಹಲವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ . ನಾವೇನಾದರೂ ಮಾತನಾಡಿದರೆ ದೇಶದ್ರೋಹಿ ಎಂದು ಕರೆಯಲಾಗುತ್ತದೆ. ಆದರೆ ದೇಶಕ್ಕಾಗಿ ಕಡೆ ಪಕ್ಷ ನಿಮ್ಮ ಮನೆಯ ನಾಯಿಯಾದರೂ ಸತ್ತಿದೆಯೇ? ಬಿಜೆಪಿಯದ್ದು ಸಿಂಹದಂತೆ ಘರ್ಜನೆ, ಇಲಿಯ ವರ್ತನೆ ಹೀಗಿದ್ದರೂ ದೇಶಭಕ್ತರು ಎಂದು ಹೇಳಿಕೊಳ್ಳುತ್ತಾರೆ ಎಂದು ಗುಡುಗಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಹಿನ್ನೆಲೆ ಇಂದು ರಾಜ್ಯಸಭೆಯಲ್ಲಿ ಕೋಲಾಹಲ ಕಾರಣವಾಯಿತು. ಬಿಜೆಪಿ ಸದಸ್ಯರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕ್ಷಮೆ ಯಾಚಿಸುವಂತೆ ಆಗ್ರಹಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ತನ್ನ ಹೇಳಿಕೆಯನ್ನು ಹೊರಗಡೆ ಹೇಳಿದ್ದು ಆ ವಿಷಯಕ್ಕೆ ಸದನದಲ್ಲಿ ಅನುಚಿತವಾಗಿ ವರ್ತಿಸುವುದು ಸರಿಯಲ್ಲ. ನಮ್ಮನ್ನು ದೇಶದ 135 ಕೋಟಿ ಜನ ನೋಡಿ ನಗುತ್ತಿದ್ದಾರೆ ಎಂದು ಉಪರಾಷ್ಟ್ರಪತಿ ಜಗದೀತ್ ಧನಕರ್ ತಿಳಿ ಹೇಳಿದ್ದಾರೆ.
*ಪಾರಂಪರಿಕ ಕಟ್ಟಡಗಳ ದುರಸ್ತಿ ಮತ್ತು ಸಂರಕ್ಷಣೆಗೆ ಕ್ರಮ*
https://pragati.taskdun.com/belagavividanaparishathsession/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ