*ಭಾರತಕ್ಕೆ ಚೀನಾ ನುಗ್ಗಿದಂತೆ ಬೆಳಗಾವಿಗೆ ನುಗ್ಗುತ್ತೇವೆ; ಮತ್ತೆ ಕಿಡಿ ಹೊತ್ತಿಸಿದ ಶಿವಸೇನೆ ನಾಯಕ*
ಪ್ರಗತಿವಾಹಿನಿ ಸುದ್ದಿ; ಮುಂಬೈ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರದಲ್ಲಿ ಎರಡೂ ರಾಜ್ಯಗಳು ಶಾಂತಿ ಕಾಪಾಡುವಂತೆ ಕೇಂದ್ರ ಗೃಹ ಸಚಿವರು ಸೂಚಿಸಿರುವ ನಡುವೆಯೂ ಮಹಾರಾಷ್ಟ್ರ ರಾಜಕೀಯ ನಾಯಕರು ಮತ್ತಷ್ಟು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಶಿವಸೇನೆ ನಾಯಕ ಸಂಜಯ್ ರಾವತ್, ಭಾರತಕ್ಕೆ ಚೀನಾ ನುಗ್ಗಿದಂತೆ ಬೆಳಗಾವಿಗೆ ನುಗ್ಗುವುದಾಗಿ ಉದ್ಧಟತನದ ಹೇಳಿಕೆ ಕೊಟ್ಟಿದ್ದಾರೆ.
ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ರಾವತ್, ಮಹಾರಾಷ್ಟ್ರದಲ್ಲಿ ದುರ್ಬಲ ಸರ್ಕಾರವಿದೆ. ಗಡಿ ವಿವಾದದಲ್ಲಿ ಯಾವುದೇ ನಿಲುವು ತೆಗೆದುಕೊಳ್ಳುತ್ತಿಲ್ಲ. ನಾವು ಗಡಿ ವಿಚಾರವಾಗಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಬಯಸುತ್ತೇವೆ ಆದರೆ ಕರ್ನಾಟಕದ ಸಿಎಂ ಕಿಡಿ ಹೊತ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಭಾರತಕ್ಕೆ ಚೀನಾ ನುಗ್ಗಿದಂತೆ ನಾವು ಕರ್ನಾಟಕದ ಬೆಳಗಾವಿಗೆ ನುಗ್ಗುತ್ತೇವೆ. ಈ ವಿಚಾರದಲ್ಲಿ ನಮಗೆ ಯಾರ ಅನುಮತಿಯೂ ಬೇಕಾಗಿಲ್ಲ ಎಂದು ಹೇಳುವ ಮೂಲಕ ಮತ್ತೆ ವಿವಾದ ಸೃಷ್ಟಿಸಿದ್ದಾರೆ.
*ಎರಡು ಶಾಲಾ ಬಸ್ ಗಳ ಭೀಕರ ಅಪಘಾತ; 15 ವಿದ್ಯಾರ್ಥಿಗಳು ದುರ್ಮರಣ*
https://pragati.taskdun.com/manipurtwo-school-busaccident15-students-death/
*ಶಾಸಕರಿಗೆ ಗೌರವ ಇಲ್ವಾ? ಸಚಿವರ ವರ್ತನೆ ಸರಿಯಿಲ್ಲ; ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ*
https://pragati.taskdun.com/belagavi-sessionsiddaramaiahgovinda-karajolamadhuswamy/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ