ಪ್ರಗತಿವಾಹಿನಿ ಸುದ್ದಿ, ನವದೆಹಲಿ:
17ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಸಂಸದರು ಪ್ರಮಾಣ ವಚನ ಸ್ವೀಕರಿಸಿದರು.
ಕರ್ನಾಟಕದ 27 ಸಂಸದರು ಸಹ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದು, 25 ಮಂದಿ ಸಂಸದರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ದಾಖಲೆ ಬರೆದರು.
ಆದರೆ ಬೆಳಗಾವಿ ಸಂಸದ ಸುರೇಶ ಅಂಗಡಿ ಮತ್ತು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸಂಸತ್‌ಗೆ ಆಯ್ಕೆ ಆಗಿರುವ ಬಿಜೆಪಿ ಸಂಸದ ಅನಂತ್‌ಕುಮಾರ್ ಹೆಗಡೆ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಲಿಲ್ಲ.
ಸುರೇಶ ಅಂಗಡಿ ಇಂಗ್ಲಿಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಮರಾಠಿ ಭಾ಼ಷಿಕರ ಭಾವನೆಗೆ ಹೊಡೆತ ಬರಬಹುದೆಂದು ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿರಲಿಕ್ಕಿಲ್ಲ.
ಅನಂತಕುಮಾರ ಹೆಗಡೆ ಕಳೆದ ಬಾರಿಯಂತೆ ಈ ಬಾರಿಯೂ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಜ್ವಲ್ ರೇವಣ್ಣ ಅನಾರೋಗ್ಯದ ಹಿನ್ನೆಲೆಯಲ್ಲಿ ಆಗಮಿಸಲಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ