ಮಹಾಲಕ್ಷ್ಮೀ ಏತ ನೀರಾವರಿ ಯೋಜನೆಗೆ 382 ಕೋಟಿ ರೂ. ಮಂಜೂರು: ಪ್ರಕಾಶ ಹುಕ್ಕೇರಿ, ಗಣೇಶ ಹುಕ್ಕೇರಿ ಹರ್ಷ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : 382.30 ಕೋಟಿ ರೂ. ವೆಚ್ಚದಲ್ಲಿ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ ಕೈಗೆತ್ತಿಕೊಳ್ಳಲು ಸಚಿವಸಂಪುಟ ಗುರುವಾರ ಅನುಮೋದನೆ ನೀಡಿದ್ದು, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಮೇಶ ಹುಕ್ಕೇರಿ ಹರ್ಷ ವ್ಯಕ್ತಪಡಿಸಿದ್ದಾರೆ. ಜೊತೆಗೆ ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಜಲಸಂಪನ್ಮೂಲ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಗ್ರಾಮದ ಬಳಿ ಹಾಲಿಯಿರುವ ಕಲ್ಲೋಳ -ಯಡೂರ್ ಬ್ಯಾರೇಜಿನ ಮೇಲ್ಭಾಗದಲ್ಲಿ ದೂಧಗಂಗಾ ನದಿಯಿಂದ ನೀರನ್ನೆತ್ತಿ ಸುಮಾರು 6400 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ.
382.30 ಕೋಟಿ ರೂ. ವೆಚ್ಚದಲ್ಲಿ ಯೋಜನೆಯನ್ನು ಕೈಗೆತ್ತಿಕೊಳ್ಳಲು ಸಚಿವಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಈ ಯೋಜನೆಯನ್ನು ಎರಡು ಹಂತಗಳಲ್ಲಿ ಅಂದರೆ ಮೊದಲನೇ ಹಂತದಲ್ಲಿ ರೂ.203 ಕೋಟಿ ಹಾಗೂ 2ನೇ ಹಂತದಲ್ಲಿ ರೂ.179.30 ಕೋಟಿಗಳಲ್ಲಿ ಕೈಗೊಳ್ಳಲು ಮತ್ತು ಮೊದಲನೇ ಹಂತದ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ.
ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಕಾಶ ಹುಕ್ಕೇರಿ ಹಾಗೂ ಗಣೇಶ ಹುಕ್ಕೇರಿ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಸಚಿವಸಂಪುಟದ ಎಲ್ಲ ಸದಸ್ಯರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಯೋಜನೆಯಿಂದ ಈ ಭಾಗದ ರೈತರ ಬಹುಕಾಲದ ಬೇಡಿಕೆ ಈಡೇರಿದಂತಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
*ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ೫೭೦೧.೩೮ ಕೋಟಿ ವೆಚ್ಚದ ನೀರಾವರಿ ಯೋಜನೆಗಳಿಗೆ ಅನುಮೋದನೆ*
https://pragati.taskdun.com/kittur-karnataka-and-kalyan-karnatakairrigation-schemecabinet-meetingapproval/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ