
ಪ್ರಗತಿವಾಹಿನಿ ಸುದ್ದಿ; ಸಿಕ್ಕಿಂ: ಭಾರತ-ಚೀನಾ ಗಡಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸೇನಾ ವಾಹನ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 16 ಭಾರತೀಯ ಯೋಧರು ಹುತಾತ್ಮರಾಗಿದ್ದು, 4 ಯೋಧರ ಸ್ಥಿತಿ ಗಂಭೀರವಾಗಿದೆ.
ಸಿಕ್ಕಿಂ ನ ಉತ್ತರ ಭಾಗದ ಝೀಮಾ ಪ್ರಾಂತ್ಯದಲ್ಲಿ ಈ ದುರಂತ ಸಂಭವಿಸಿದೆ. ಸೇನಾ ವಾಹನ ಪ್ರಪಾತಕ್ಕೆ ಉರುಳಿ ಬಿದ್ದಿದ್ದು, ಸ್ಥಳದಲ್ಲೇ 16 ಯೋಧರು ಕೊನೆಯುಸಿರೆಳೆದಿದ್ದಾರೆ.
ಸೇನಾ ವಾಹನ ಚಾಟೆನ್‌ನಿಂದ ಥಾಂಗು ಕಡೆಗೆ ತೆರಳುತ್ತಿತ್ತು. ಈ ವೇಳೆ ಝೀಮಾ ಮಾರ್ಗದಲ್ಲಿ ವಾಹನ ಅಪಘಾತಕ್ಕೀಡಾಗಿದೆ. ನಾಲ್ವರು ಯೋಧರ ಸ್ಥಿತಿ ಗಂಭೀರವಾಗಿದ್ದು, ಏರ್ ಲಿಫ್ಟ್ ಮಾಡಿ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೇನಾ ವಾಹನ ಅಪಘಾತದಲ್ಲಿ 16 ಯೋಧರ ಸಾವು ಪ್ರಕರಣ ಬಗ್ಗೆ ಆಘಾತ ವ್ಯಕ್ತಪಡಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಘಟನೆ ಸುದ್ದಿ ತಿಳಿದು ತುಂಬಾ ದು:ಖವಾಗಿದೆ. ಗಾಯಾಳು ಸೈನಿಕರು ಬೇಗನೇ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
*COVID Alert: ತುರ್ತು ಸಭೆ ಕರೆದ ಸಚಿವ ಆರ್.ಅಶೋಕ್; ಮತ್ತೆ ಜಾರಿಯಾಗುತ್ತಾ ಟಫ್ ರೂಲ್ಸ್?*
https://pragati.taskdun.com/covidemergency-meetingr-ashokvidhanasoudha/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ