ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ BF.7 ಹರಡುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳ ಒಕ್ಕೂಡ -ರುಪ್ಸಾ ಸಂಸ್ಥೆ ಖಾಸಗಿ ಶಾಲೆಗಳಿಗೆ ಮಾರ್ಗಸೂಚಿ ಪ್ರಕಟಿಸಿದೆ.
ರಾಜ್ಯದ ಎಲ್ಲಾ ಅನುದಾನರಹಿತ ಖಾಸಗಿ ಶಾಲೆಗಳಿಗೆ ಇಂದಿನಿಂದ ಅನ್ವಯವಾಗುವಂತೆ ಗೈಡ್ ಲೈನ್ ಜಾರಿಗೊಳಿಸಲಾಗಿದೆ. ಕಡ್ಡಾಯವಾಗಿ ಮಾರ್ಗಸೂಚಿ ಪಾಲಿಸುವಂತೆ ರುಪ್ಸಾ ತಿಳಿಸಿತೆ.
ಗೈಡ್ ಲೈನ್:
* ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು
* ವಿದ್ಯಾರ್ಥಿಗಳಲ್ಲಿ ಜ್ವರ, ನೆಗಡಿ, ಕೆಮ್ಮು ಕಾಣಿಸಿಕೊಂದರೆ ವಿದಾರ್ಥಿಗಳಿಗೆ ರಜೆ ನೀಡಬೇಕು.
* ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೂ ಮಾಸ್ಕ್ ಕಡ್ಡಾಯ
* ಶಾಲೆಗಳಲ್ಲಿ ಎರಡು ದಿನಗಳಿಗೊಮ್ಮೆ ಸ್ಯಾನಿಟೈಸ್ ಮಾಡಬೇಕು.
* ಬೂಸ್ಟರ್ ಡೋಸ್ ಪಡೆದಿರಬೇಕು
* ಶಾಲಾ ಆವರಣದಲ್ಲಿ ಮಕ್ಕಳು ಗುಂಪುಗೂಡುವಂತಿಲ್ಲ
* ಸಾಮಾಜಿಕ ಅಂತರ ಪಾಲನೆ ಕಡ್ಡಾಯ
* ಮಕ್ಕಳು ಆಹಾರ, ನೀರು ಹಂಚಿಕೊಳ್ಳದಂತೆ ನೋಡಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಬೆಳಗಾವಿಯಲ್ಲಿ ಒಂದಾದ ಕರವೇ – ಎಂಇಎಸ್ ನಾಯಕರು!
https://pragati.taskdun.com/krv-and-mes-leaders-one-in-belgaum-mes-leaders/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ