Latest

*ಫೆಬ್ರವರಿಯಲ್ಲಿ ರಾಜ್ಯ ಬಜೆಟ್ ಮಂಡನೆ*

ಪ್ರಗತಿವಾಹಿನಿ ಸುದ್ದಿ; ಹಾವೇರಿ: ಫೆಬ್ರವರಿ ತಿಂಗಳಲ್ಲಿ ಬಜೆಟ್ ಮಂಡನೆಯಾಗುತ್ತದೆ. ಈ ಸಂಬಂಧ ಹಣಕಾಸಿನ ಇಲಾಖೆಯೊಂದಿಗೆ ಎರಡು ಸುತ್ತಿನ ಚರ್ಚೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಹಾವೇರಿಯ ಶಿಗ್ಗಾವಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಫೆಬ್ರವರಿಯಲ್ಲಿ ರಾಜ್ಯ ಬಜೆಟ್ ಮಂಡಿಸುತ್ತೇನೆ. ಅಧಿವೇಶನ ಮುಗಿದ ನಂತರ ಎಲ್ಲ ಇಲಾಖೆಗಳು, ಸಂಘಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು. ಜನವರಿ ತಿಂಗಳಿನಿಂದ ಬಜೆಟ್ ನ ಪೂರ್ವಭಾವಿ ಸಿದ್ಧತೆಗಳನ್ನು ಮಾಡಲಾಗುವುದು ಎಂದು ಹೇಳಿದರು.

ಕರೋನಾ ನಿಯಂತ್ರಣಾ ಕ್ರಮ :

ಕರೋನಾ ನಿಯಂತ್ರಣ ಕ್ರಮಗಳ ಬಗ್ಗೆ ಉತ್ತರಿಸುತ್ತಾ, ಐಎಲ್ ಐ ಮತ್ತು ಸಾರಿಗಳ ಪರೀಕ್ಷೆ ಹೆಚ್ಚಿಸಲಾಗುವುದು ಹಾಗೂ ಬೂಸ್ಟರ್ ಡೋಸ್ ಗಳನ್ನು ಹೆಚ್ಚಿಸಲಾಗುವುದು. ಆಸ್ಪತ್ರೆಗಳಲ್ಲಿ ಆಕ್ಸಿಜನ್ , ಬೆಡ್ ಗಳು ಸೇರಿದಂತೆ ಮೂಲಭೂತಸೌಕರ್ಯಗಳನ್ನು ಸಜ್ಜುಗೊಳಿಸುವುದು ಹಾಗೂ ಐಸಿಯು ಘಟಕಗಳನ್ನು ಸಿದ್ದಪಡಿಸಿಕೊಳ್ಳುವುದು. ಮಾಸ್ಕ್ ಗಳನ್ನು ಧರಿಸಬೇಕು ಹಾಗೂ ಅಂತರ ಕಾಯ್ದುಕೊಳ್ಳಬೇಕು. ಏರ್ ಪೋರ್ಟ್, ಮತ್ತು ಬಸ್ ನಿಲ್ದಾಣಗಳಲ್ಲಿ ಮೊದಲು ಪಾಲಿಸುತ್ತಿದ್ದ ನಿಯಂತ್ರಣಾ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರೋನಾ ಮುಂಜಾಗ್ರತಾ ಕ್ರಮ :

ಕನ್ನಡ ಸಾಹಿತ್ಯ ಸಮ್ಮೇಳನ ಬಯಲು ಪ್ರದೇಶದಲ್ಲಿ ಆಗುವುದರಿಂದ, ಕೊರೊನಾದಿಂದ ತೊಂದರೆಯ ಸಾಧ್ಯತೆ ಇಲ್ಲ. ಆದರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಮಾರ್ಗಸೂಚಿಗಳನ್ನು ಸೂಚಿಸಲಾಗುವುದು ಎಂದರು.

*ಈ 5 ದೇಶದ ಪ್ರಯಾಣಿಕರಿಗೆ RT-PCR ಕಡ್ಡಾಯ; ಮತ್ತೆ ಕ್ವಾರಂಟೈನ್ ರೂಲ್ಸ್ ಸುಳಿವು ನೀಡಿದ ಸಚಿವರು*

https://pragati.taskdun.com/bf-7-viruscorona-virusinternational-travelersrt-pcr-testmandatory/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button