ಪ್ರಗತಿವಾಹಿನಿ ಸುದ್ದಿ;ಮಂಗಳೂರು: ಕಡಲನಗರಿ ಮಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆ ಪ್ರಕರನ ನಡೆದಿದ್ದು, ಕಾಟಿಪಳ್ಳ ಬಳಿ ಫ್ಯಾನ್ಸಿ ಅಂಗಡಿ ಮಾಲೀಕ ಅಬ್ದುಲ್ ಜಲೀಲ್ ಎಂಬಾತನನ್ನು ದುಷ್ಕರ್ಮಿಗಳು ಕೊಲೆಗೈದು ಪರಾರಿಯಾಗಿದ್ದಾರೆ.
ಜಲೀಲ್ ಹತ್ಯೆ ಪ್ರಕರಣದ ಬೆನ್ನಲ್ಲೇ ಮಂಗಳೂರಿನ ಸೂರತ್ಕಲ್ ನಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದ್ದುಪರಿಸ್ಥಿತಿ ಬೂದಿ ಮುಚ್ಚಿದ ಕೆಂದದಂತಿದೆ. ಸೂರತ್ಕಲ್ ಸೇರಿದಂತೆ ವಿವಿಧೆಡೆ ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಸ್ಥಳಕ್ಕೆ ಭೆಟಿ ನೀಡಿ ಪರಿಶೀಲನೆ ನಡೆಸಿರುವ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್, ಡಿ.24ರಂದು ರಾತ್ರಿ ಕಾಟಿಪಳ್ಳ ನಾಲ್ಕನೇ ಕ್ರಾಸ್ ನಲ್ಲಿ ಫಾತಿಮಾ ಸ್ಟೋರ್ ಬಳಿ ಅಂಗಡಿ ಮಾಲೀಕ ಅಬ್ದುಲ್ ಜಲೀಲ್ ಎಂಬಾತನ ಜೊತೆ ಕೆಲವರು ಕ್ಷುಲ್ಲಕ ಕಾರಣಕ್ಕೆ ಜಗಳ ಶುರು ಮಾಡಿ ಗಲಾಟೆ ವಿಕೋಪಕ್ಕೆ ತಿರುಗಿದೆ. ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.ಗಂಭೀರವಾಗಿ ಗಾಯಗೊಂಡಿದ್ದ ಅಬ್ದುಲ್ ಜಲೀಲ್ ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿರುವುದರಿಂದ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಸೂರತ್ಕಲ್, ಬಜ್ಪೆ, ಕಾವೂರು, ಪಣಂಬೂರು ವ್ಯಾಪ್ತಿಯಲ್ಲಿ ಇಂದಿನಿಂದ ಡಿ.27ರವರೆಗೆ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ತುರ್ತು ಸೇವೆ ಹೊರತು ಪಡಿಸಿ ಬೇರೆ ಯಾವುದೇಸೇವೆಗೆ ಅವಕಾಶಗಳು ಇಲ್ಲ. ವಾಹನ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು.
*ಹೃದಯಾಘಾತ: ಹಿರಿಯ ನಟ ಚಲಪತಿ ರಾವ್ ಇನ್ನಿಲ್ಲ*
https://pragati.taskdun.com/tollywoodactorchalapati-raodeath/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ