
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: BF.7 ಕೊರೊನಾ ಹೊಸ ರೂಪಾಂತರಿ ಆತಂಕ ಹೆಚ್ಚುತ್ತಿದ್ದು, ಕೋವಿಡ್ ತಡೆಗೆ ರಾಜ್ಯದಲ್ಲಿ ನಾಳೆಯಿಂದಲೇ ಕಠಿಣ ನಿಮಗಳು ಜಾರಿಯಾಗುವ ಸಾಧ್ಯತೆ ಇದೆ.
ಚೀನಾ, ಜಪಾನ್, ಕೊರಿಯಾ ಸೇರಿದಂತೆ ವಿದೇಶಗಳಲ್ಲಿ ಕೊರೊನಾ ಅಟ್ಟಹಾಸಕ್ಕೆ ಜನರು ಬಲಿಯಾಗುತ್ತಿದ್ದು, ಆರೋಗ್ಯ ತುರ್ತು ಪರಿಸ್ಥಿತಿಯುಂಟಾಗಿದೆ. ಈ ನಿಟ್ಟಿನಲ್ಲಿ ಭಾರತದಲ್ಲಿಯೂ ಸಾಕಷ್ಟು ಮುಂಜಾಗೃತೆ ಕೈಗೊಳ್ಳಲಾಗುತ್ತಿದ್ದು, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಮೆಟ್ರೋ, ಬಸ್ ನಿಲ್ದಾಣಗಳಲ್ಲಿ ಈಗಾಗಲೇ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ರಾಜ್ಯದಲ್ಲಿಯೂ ಹಲವೆಡೆಗಳಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಟವಾಗುವ ಮೊದಲೇ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಹೊಸ ವರ್ಷಾಚಣೆ ಹಿನ್ನೆಲೆಯಲ್ಲಿ ಹೊಸ ಗೈಡ್ ಲೈನ್ ಹಾಗೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನಾಳೆ ಬೆಳಗಾವಿಯ ಅಧಿವೇಶನದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆ ಇದೆ.
ಪ್ರಮುಖವಾಗಿ ರಾಜಧಾನಿ ಬೆಂಗಳೂರಿಗೆ ಪ್ರತ್ಯೇಕ ಗೈಡ್ ಲೈನ್ ಪ್ರಕಟಿಸುವ ಬಗ್ಗೆ ಚಿಂತನೆ ನಡೆದಿದೆ. ನಾಳೆಯಿಂದಲೇ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ, ಸ್ಯಾನಿಟೈಸಿಂಗ್, ಸಾಮಾಜಿಕ ಅಂತರ ಪಾಲನೆ ನಿಯಮಗಳು ಜಾರಿಗೆ ಬರಲಿದೆ ಎಂದು ಹೇಳಲಾಗುತ್ತಿದೆ.
ಒಟ್ಟಾರೆ ಈ ವರ್ಷವೂ ಹೊಸ ವರ್ಷಾಚರಣೆ ಸಡಗರಕ್ಕೆ ಬ್ರೇಕ್ ಬೀಳುವುದು ಬಹುತೇಕ ಖಚತವಾಗಿದ್ದು, ಬೆಂಗಳೂರಿನ ಬ್ರಿಗೇಡ್ ರೋಡ್, ಎಂಜಿ ರೋಡ್ ನಲ್ಲಿನ ಸಂಭ್ರಮಾಚರಣೆಗೆ ಹೊಸ ನಿಯಮಗಳು ಜಾರಿಯಾಗುವ ಸಾಧ್ಯತೆ ಇದೆ. ನಾಳೆ ನಡೆಯಲಿರುವ ಕೋವಿಡ್ ಮೀಟಿಂಗ್ ನಲ್ಲಿ ಈ ಬಗ್ಗೆ ನಿರ್ಧಾರ ಹೊರಬೀಳಲಿದೆ.
*ವದಂತಿಗಳಿಗೆ ತೆರೆ; ಸ್ಪಷ್ಟ ಸಂದೇಶ ರವಾನಿಸಿದ ಮಾಜಿ ಸಚಿವ ಜನಾರ್ಧನ ರೆಡ್ಡಿ ಕ್ಷೇತ್ರ ಘೋಷಣೆ*
https://pragati.taskdun.com/janardhana-reddypressmeetbangalore/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ